ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ಜನಾರ್ದನ ರೆಡ್ಡಿ
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರಕ್ಕೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದು, ಜನವರಿ 17ರಂದು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ. ಪಾದಯಾತ್ರೆ ಜೊತೆಗೆ ಸಮಾವೇಶ ಮಾಡುವ ಚಿಂತನೆ ಇದೆ. ಈ ಕುರಿತು ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.
ಬೆಂಗಳೂರು, ಜನವರಿ 10: ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿ ಜನವರಿ 17ರಂದು ಬಳ್ಳಾರಿಯಲ್ಲಿ ಬೃಹತ್ ಹೋರಾಟಕ್ಕೆ ಮುಂದಾಗಿದೆ. ಗಲಭೆ ಮತ್ತು ಅದರ ನಂತರದ ಬೆಳವಣಿಗೆಗಳನ್ನು ವಿರೋಧಿಸಿ ಬಿಜೆಪಿ ಪಾದಯಾತ್ರೆ ನಡೆಸಲು ನಿರ್ಧರಿಸಿದೆ ಎಂದು ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ಘೋಷಿಸಿದ್ದಾರೆ. ಪಾದಯಾತ್ರೆ ಜೊತೆಗೆ ಸಮಾವೇಶ ಮಾಡುವ ಚಿಂತನೆ ನಡೆದಿದ್ದು, ಈ ಕುರಿತು ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿದ್ದೇನೆ. 2 ದಿನದಲ್ಲಿ ಹೋರಾಟದ ರೂಪರೇಷೆ ಅಂತಿಮವಾಗುತ್ತೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
