ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ: ವಿಡಿಯೋ ನೋಡಿ
ಒಂದೆಡೆ ಭಾರತದ ಆಪರೇಷನ್ ಸಿಂದೂರ್ ಪ್ರತಿದಾಳಿಯಿಂದ ಬೆಚ್ಚಿಬಿದ್ದಿರುವ ಪಾಕಿಸ್ತಾನಕ್ಕೆ ಮತ್ತೊಂದೆಡೆ, ಬಲೂಚ್ ಲಿಬರೇಷನ್ ಆರ್ಮಿ ಪ್ರತಿರೋಧದ ಬಿಸಿ ಮುಟ್ಟಿಸುತ್ತಿದೆ. ಬಲೂಚಿಸ್ತಾನ ಆರ್ಮಿ ನಡೆಸಿದ ಐಇಡಿ ದಾಳಿಯ ಪರಿಣಾಮ ಪಾಕಿಸ್ತಾನದ 12 ಯೋಧರು ಮೃತಪಟ್ಟಿದ್ದು, ಅವರ ದೇಹಗಳು ಛಿದ್ರಛಿದ್ರವಾಗಿ ಹಾರಿರುವ ವಿಡಿಯೋವನ್ನು ಬಿಎಲ್ಎ ಹಂಚಿಕೊಂಡಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಸಂಘರ್ಷದ ವಾತಾವರಣವಿದೆ. ಇಂಥ ಸಂದರ್ಭದಲ್ಲೇ ಅತ್ತ ಪಾಕಿಸ್ತಾನದ ನೈಋತ್ಯ ಪ್ರಾಂತ್ಯದ ಬಲೂಚಿಸ್ತಾನದ ಕಚ್ಚಿ ಜಿಲ್ಲೆಯ ಮಾಚ್ ಪ್ರದೇಶದಲ್ಲಿ ಬಲೂಚ್ ಲಿಬರೇಷನ್ ಆರ್ಮಿಯು ಪಾಕಿಸ್ತಾನ ಸೇನೆಯ ಯೋಧರು ಸಂಚರಿಸುತ್ತಿದ್ದ ವಾಹನವನ್ನು ಐಇಡಿ ಬಳಸಿ ಸ್ಫೋಟಿಸಿ 12 ಸೈನಿಕರ ಹತ್ಯೆ ಮಾಡಿದೆ. ಪಾಕಿಸ್ತಾನ ಸೈನಿಕರು ಸ್ಫೋಟದಲ್ಲಿ ಮೃತಪಟ್ಟು, ಅವರ ದೇಹಗಳು ಛಿದ್ರವಾಗಿ ಹಾರಾಡಿರುವ ವಿಡಿಯೋವನ್ನು ಬಲೂಚ್ ಲಿಬರೇಷನ್ ಆರ್ಮಿ ಬಿಡುಗಡೆ ಮಾಡಿದೆ. ಆ ವಿಡಿಯೋ ಇಲ್ಲಿದೆ.
ವಿವರಗಳಿಗೆ ಓದಿ: ಭಾರತ ಉಗ್ರರ ಟಾರ್ಗೆಟ್ ಮಾಡಿದ್ರೆ ಪಾಕಿಸ್ತಾನ ಸೇನೆ ಮೇಲೆಯೇ ದಾಳಿ ನಡೆಸಿದ ಬಲೂಚ್ ಆರ್ಮಿ: 12 ಪಾಕ್ ಸೈನಿಕರು ಸಾವು
Published on: May 08, 2025 07:56 AM
Latest Videos
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್ಬಾಸ್ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್ಮಿಸ್

