AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್ ಒಳಗೆ ಕೇಸರಿ ಶಾಲು ಒಯ್ಯಲು ತಡೆ; ಪೊಲೀಸರಿಗೆ ಬಿಜೆಪಿ ಎಂಎಲ್‌ಸಿಗಳಿಂದ ಹಿಗ್ಗಾಮುಗ್ಗಾ ತರಾಟೆ

ಪರಿಷತ್ ಒಳಗೆ ಕೇಸರಿ ಶಾಲು ಒಯ್ಯಲು ತಡೆ; ಪೊಲೀಸರಿಗೆ ಬಿಜೆಪಿ ಎಂಎಲ್‌ಸಿಗಳಿಂದ ಹಿಗ್ಗಾಮುಗ್ಗಾ ತರಾಟೆ

ಕಿರಣ್​ ಹನಿಯಡ್ಕ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 29, 2024 | 3:24 PM

Share

ವಿಧಾನ ಪರಿಷತ್ ಒಳಗೆ ಕೇಸರಿ ಶಾಲು ತೆಗೆದುಕೊಂಡು ಹೋಗುತ್ತಿದ್ದ ಬಿಜೆಪಿ ಸದಸ್ಯರನ್ನು ಪೊಲೀಸರು ತಡೆದಿದ್ದಾರೆ. ಹೌದು, ಇಂದು ವಿಧಾನ ಪರಿಷತ್​ಗೆ ಕೇಸರಿ ಶಾಲು ತೆಗೆದುಕೊಂಡು ಹೋಗುತ್ತಿದ್ದ ಬಿಜೆಪಿ ಸದಸ್ಯ ಕೇಶವಪ್ರಸಾದ್ ಅವರನ್ನು ಪೊಲೀಸರು ತಡೆದಿದ್ದರು. ಈ ವೇಳೆ ಬಿಜೆಪಿ ಎಂಎಲ್​ಸಿ(MLC)ಗಳಾದ ಕೇಶವಪ್ರಸಾದ್ ಮತ್ತು ರಘುನಾಥ್ ರಾವ್ ಮಲ್ಕಾಪುರೆ ಅವರು ಪೊಲೀಸರಿಗೆ ಹಿಗ್ಗಾಮುಗ್ಗಾ ತರಾಟೆಗೆತ್ತಿಕೊಂಡಿದ್ದಾರೆ.

ಬೆಂಗಳೂರು, ಫೆ.29: ವಿಧಾನ ಪರಿಷತ್ ಒಳಗೆ ಕೇಸರಿ ಶಾಲು ತೆಗೆದುಕೊಂಡು ಹೋಗುತ್ತಿದ್ದ ಬಿಜೆಪಿ ಸದಸ್ಯರನ್ನು ಪೊಲೀಸರು ತಡೆದಿದ್ದಾರೆ. ಹೌದು, ಇಂದು ವಿಧಾನ ಪರಿಷತ್​ಗೆ ಕೇಸರಿ ಶಾಲು ತೆಗೆದುಕೊಂಡು ಹೋಗುತ್ತಿದ್ದ ಬಿಜೆಪಿ ಸದಸ್ಯ ಕೇಶವಪ್ರಸಾದ್ ಅವರನ್ನು ಪೊಲೀಸರು ತಡೆದಿದ್ದರು. ಈ ವೇಳೆ ಬಿಜೆಪಿ ಎಂಎಲ್​ಸಿ(MLC)ಗಳಾದ ಕೇಶವಪ್ರಸಾದ್ ಮತ್ತು ರಘುನಾಥ್ ರಾವ್ ಮಲ್ಕಾಪುರೆ ಸ್ಥಳಕ್ಕೆ ಪೊಲೀಸ್ ಇನ್ಸ್​ಪೆಕ್ಟರ್ ಕರೆಸಿ ಹಿಗ್ಗಾಮುಗ್ಗಾ ತರಾಟೆಗೆತ್ತಿಕೊಂಡಿದ್ದಾರೆ. ತರಾಟೆಗೆತ್ತಿಕೊಂಡ ಬಳಿಕ ಕೇಸರಿ ಶಾಲನ್ನು ತೆಗೆದುಕೊಂಡು ಹೋಗಲು ಪೊಲೀಸರು ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More