ಹಂಗೂ ಹಿಂಗೂ ಹೆಂಗೋ ಗೆದ್ದ ಆಸ್ಟ್ರೇಲಿಯಾ!
Bangladesh vs Australia, 3rd ODI: ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 50 ಓವರ್ಗಳಲ್ಲಿ ಕಲೆಹಾಕಿದ್ದು 274 ರನ್ಗಳು. ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಪರ ಆರಂಭಿಕ ದಾಂಡಿಗ ಕೂಪರ್ ಕೊನೊಲಿ (149) ಭರ್ಜರಿ ಶತಕ ಸಿಡಿಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡಕ್ಕೆ ಕೊನೆಯ 12 ಎಸೆತಗಳಲ್ಲಿ 5 ರನ್ಗಳ ಅವಶ್ಯಕತೆಯಿತ್ತು.
ಬಾಂಗ್ಲಾದೇಶ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಎರಡು ಏಕದಿನ ಪಂದ್ಯಗಳಲ್ಲಿ ಸೋಲನುಭವಿಸಿದ್ದ ಆಸ್ಟ್ರೇಲಿಯಾ ತಂಡ ಕೊನೆಗೂ ಒಂದು ಗೆಲುವು ದಾಖಲಿಸಿದೆ. ಅದು ಕೂಡ ಕೊನೆಯ ಓವರ್ನಲ್ಲಿ ಕೇವಲ 1 ವಿಕೆಟ್ನ ಅಂತರದಿಂದ. ಢಾಕಾದ ಶೇರೆ ಬಾಂಗ್ಲಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 50 ಓವರ್ಗಳಲ್ಲಿ ಕಲೆಹಾಕಿದ್ದು 274 ರನ್ಗಳು. ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಪರ ಆರಂಭಿಕ ದಾಂಡಿಗ ಕೂಪರ್ ಕೊನೊಲಿ (149) ಭರ್ಜರಿ ಶತಕ ಸಿಡಿಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡಕ್ಕೆ ಕೊನೆಯ 12 ಎಸೆತಗಳಲ್ಲಿ 5 ರನ್ಗಳ ಅವಶ್ಯಕತೆಯಿತ್ತು.
ಈ ಹಂತದಲ್ಲಿ ದಾಳಿಗಿಳಿದ ಮುಸ್ತಫಿಝುರ್ ರೆಹಮಾನ್ ಆಸ್ಟ್ರೇಲಿಯಾದ 9ನೇ ವಿಕೆಟ್ ಕಬಳಿಸಿ ನೀಡಿದ್ದು ಕೇವಲ 2 ರನ್ಗಳು ಮಾತ್ರ. ಪರಿಣಾಮ ಕೊನೆಯ ಓವರ್ನಲ್ಲಿ ಆಸೀಸ್ ಪಡೆಗೆ 3 ರನ್ಗಳ ಅವಶ್ಯಕತೆಯಿತ್ತು. ಇತ್ತ ಬಾಂಗ್ಲಾದೇಶ್ ತಂಡಕ್ಕೆ ಒಂದು ವಿಕೆಟ್ನ ಅಗತ್ಯತೆ.
ಅದರಂತೆ 50ನೇ ಓವರ್ ಎಸೆದ ತಸ್ಕಿನ್ ಅಹ್ಮದ್ ಕೇವಲ 1 ರನ್ ನೀಡಿದರು. ಎರಡನೇ ಎಸೆತದಲ್ಲಿ ಯಾವುದೇ ರನ್ ಇಲ್ಲ. ಮೂರನೇ ಎಸೆತದಲ್ಲಿ ಆ್ಯಡಂ ಝಂಪಾ ಫೋರ್ ಬಾರಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 49.3 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 277 ರನ್ಗಳಿಸಿ 1 ವಿಕೆಟ್ನ ರೋಚಕ ಜಯ ಸಾಧಿಸಿದೆ.
ಈ ಸೋಲಿನ ಹೊರತಾಗಿಯೂ ಬಾಂಗ್ಲಾದೇಶ್ ತಂಡವು ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ 2-1 ಅಂತರದಿಂದ ಏಕದಿನ ಸರಣಿ ಗೆದ್ದುಕೊಂಡಿದೆ.
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!

