ಬಂಡೀಪುರದಲ್ಲಿ ಏಕಾಏಕಿ ಕಾರುಗಳ ಮೇಲೆ ಕಾಡಾನೆ ದಾಳಿ, ಬೆಚ್ಚಿಬಿದ್ದ ಪ್ರಯಾಣಿಕರು: ವಿಡಿಯೋ ವೈರಲ್

Edited By:

Updated on: Jul 20, 2026 | 12:47 PM

Chamarajanagara News: ಬಂಡೀಪುರ-ಕೆಕ್ಕನಹಳ್ಳ ರಸ್ತೆಯಲ್ಲಿ ‘ತರಕಾರಿ ರಾಜ’ ಎಂದೇ ಪ್ರಸಿದ್ಧಿಯಾಗಿರುವ ಕಾಡಾನೆ ಮತ್ತೆ ರಸ್ತೆಗೆ ಇಳಿದು ಕಾರುಗಳ ಮೇಲೆ ದಾಳಿ ನಡೆಸಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಪ್ರಯಾಣಿಕರಲ್ಲಿ ಆತಂಕ ಮನೆಮಾಡಿದೆ. ಇತ್ತೀಚೆಗಷ್ಟೇ ಕೆಲವು ದಿನಗಳ ಹಿಂದೆ ಈ ಕಾಡಾನೆ ಲಾರಿಯೊಂದರ ಮೇಲೆ ದಾಳಿ ಮಾಡಿತ್ತು.

ಚಾಮರಾಜನಗರ, ಜುಲೈ 20: ಹಲವು ದಿನಗಳಿಂದ ಸೈಲೆಂಟಾಗಿದ್ದ ಬಂಡೀಪುರದ ‘ತರಕಾರಿ ರಾಜ’ ಕಾಡಾನೆ ಮತ್ತೆ ರಸ್ತೆಗೆ ಇಳಿದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ-ಕೆಕ್ಕನಹಳ್ಳ ರಸ್ತೆಯಲ್ಲಿ ಆಹಾರ ಅರಸಿ ಬಂದ ಆನೆ, ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರುಗಳ ಬಳಿ ತೆರಳಿ ದಾಳಿ ನಡೆಸಿದೆ. ತರಕಾರಿ ಸಾಗಿಸುವ ವಾಹನಗಳನ್ನು ಗುರಿಯಾಗಿಸಿಕೊಂಡು ನಡುರಸ್ತೆಯಲ್ಲೇ ನಿಲ್ಲುವ ಈ ಕಾಡಾನೆ, ಈ ಬಾರಿ ಕಾರುಗಳ ಬಳಿಗೂ ತೆರಳಿ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲವು ದಿನಗಳ ಹಿಂದಷ್ಟೇ ಈ ಕಾಡಾನೆ ಲಾರಿಯೊಂದರ ಮೇಲೆ ದಾಳಿ ಮಾಡಿದ್ದು, ಆ ವಿಡಿಯೋ ಸಹ ವೈರಲ್ ಆಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More