ನೀರಲ್ಲಿ ಧುಮುಕಿ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ನಡೆದ ಭಯಾನಕ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರವಾಸಿಗರೊಬ್ಬರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ದೃಶ್ಯದಲ್ಲಿ, ನೀರು ಕುಡಿಯಲು ಬಂದಿದ್ದ ಜಿಂಕೆಯನ್ನು ಹುಲಿ ಬೇಟೆಯಾಡುವುದನ್ನು ಕಾಣಬಹುದು. ಈ ಘಟನೆ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ. ಈ ವಿಡಿಯೋ ವ್ಯಾಪಕವಾಗಿ ಹರಡುತ್ತಿದೆ.
ಚಾಮರಾಜನಗರ, ಜೂನ್ 15: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ನೀರು ಕುಡಿಯಲು ಬಂದಿದ್ದ ಜಿಂಕೆಯನ್ನು ಕೊಂದ ಹುಲಿ ಬೇಟೆಯಾಡಿರುವ ದೃಶ್ಯ ಸಫಾರಿಗೆ ಹೋಗಿದ್ದ ಪ್ರವಾಸಿಗರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜಿಂಕೆ ಕತ್ತಿಗೆ ಬಾಯಿ ಹಾಕಿ ಕಚ್ಚಿರುವ ವಿಡಿಯೋ ಪ್ರವಾಸಿಗರ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಘಟನೆ ನಡೆದಿದೆ.
Latest Videos