ನೀರಲ್ಲಿ ಧುಮುಕಿ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ

Edited By: ವಿವೇಕ ಬಿರಾದಾರ

Updated on: Jun 15, 2025 | 9:04 PM

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ನಡೆದ ಭಯಾನಕ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರವಾಸಿಗರೊಬ್ಬರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ದೃಶ್ಯದಲ್ಲಿ, ನೀರು ಕುಡಿಯಲು ಬಂದಿದ್ದ ಜಿಂಕೆಯನ್ನು ಹುಲಿ ಬೇಟೆಯಾಡುವುದನ್ನು ಕಾಣಬಹುದು. ಈ ಘಟನೆ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ. ಈ ವಿಡಿಯೋ ವ್ಯಾಪಕವಾಗಿ ಹರಡುತ್ತಿದೆ.

ಚಾಮರಾಜನಗರ, ಜೂನ್​ 15: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ನೀರು ಕುಡಿಯಲು ಬಂದಿದ್ದ ಜಿಂಕೆಯನ್ನು ಕೊಂದ ಹುಲಿ ಬೇಟೆಯಾಡಿರುವ ದೃಶ್ಯ ಸಫಾರಿಗೆ ಹೋಗಿದ್ದ ಪ್ರವಾಸಿಗರ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜಿಂಕೆ ಕತ್ತಿಗೆ ಬಾಯಿ ಹಾಕಿ ಕಚ್ಚಿರುವ ವಿಡಿಯೋ ಪ್ರವಾಸಿಗರ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ ಘಟನೆ ನಡೆದಿದೆ.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More