ಏರ್​ಶೋ: ಏರ್​ಪೋರ್ಟ್​​ ರಸ್ತೆಯಲ್ಲಿ ಕಿಲೋಮೀಟರ್​ಗಟ್ಟಲೆ ಟ್ರಾಫಿಕ್ ಜಾಮ್​

Edited By:

Updated on: Feb 11, 2025 | 11:36 AM

ಏರೋ ಇಂಡಿಯಾ 2025ರ ಏರ್ ಶೋ ಕಾರಣ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯಲ್ಲಿ ಕಿಲೋಮೀಟರ್​​ನಷ್ಟು ಉದ್ದ ಸಂಚಾರ ದಟ್ಟಣೆ ಉಂಟಾಗಿದೆ. ಬಾಗಲೂರು ಕ್ರಾಸ್ ಸ್ಕೈ ವಾಕ್ ಬಳಿ ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ಆ್ಯಂಬುಲೆನ್ಸ್ ಕೂಡ ಪರದಾಡುವಂತಾಗಿದೆ. ಆದರೂ ಟ್ರಾಫಿಕ್ ಪೊಲೀಸರು ನೆರವಿಗೆ ಧಾವಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು, ಫೆಬ್ರವರಿ 11: ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್​ಶೋ ನಡೆಯುತ್ತಿರುವ ಕಾರಣ ವಿಮಾನ ನಿಲ್ದಾಣ ರಸ್ತೆಯಲ್ಲಿ ಕಿಲೋಮೀಟರ್​ಗಟ್ಟಲೆ ಟ್ರಾಫಿಕ್ ಜಾಮ್ ಆಗಿ, ವಾಹನ ಸವಾರರು ಪರದಾಡುವಂತಾಗಿದೆ. ಬಾಗಲೂರು ಕ್ರಾಸ್ ಸ್ಕೈ ವಾಕ್ ಬಳಿ ಆ್ಯಂಬುಲೆನ್ಸ್​ ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿದೆ. ಟ್ರಾಫಿಕ್​ನಲ್ಲಿ ಆ್ಯಂಬುಲೆನ್ಸ್​ ಸಿಲುಕಿದ್ದರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ ಆರೋಪ ಕೇಳಿಬಂದಿದೆ. ಅಡ್ಡಲಾಗಿ ನಿಂತಿದ್ದ ವಾಹನಗಳನ್ನು ಮುಂದಕ್ಕೆ ಕಳುಹಿಸದೆ, ಆ್ಯಂಬುಲೆನ್ಸ್​ಗೆ ದಾರಿ ಮಾಡಿಕೊಡದೆ ಸಂಚಾರಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನಲಾಗಿದೆ.

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More