ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಮುಷ್ಕರ; ಹೇಗಿದೆ ಎಫೆಕ್ಟ್? ಮೆಜೆಸ್ಟಿಕ್ನಲ್ಲಿ ಹೇಗಿದೆ ಸಂಚಾರ?
ಬೆಂಗಳೂರಿನಲ್ಲಿ ಇಂದು ಖಾಸಗಿ ಸಾರಿಗೆ ಒಕ್ಕೂಟದಿಂದ ಮುಷ್ಕರ ಮಾಡುತ್ತಿದ್ದು ಖಾಸಗಿ ಸಾರಿಗೆ ಮುಷ್ಕರಕ್ಕೆ ಮೆಜೆಸ್ಟಿಕ್ ಆಟೋ ಸಂಘ ಬೆಂಬಲ ಸೂಚಿಸಿದೆ. ಹೀಗಾಗಿ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಆಟೋ ನಿಲ್ದಾಣದಲ್ಲಿ ಒಂದು ಆಟೋ ಕೂಡ ಕಂಡು ಬಂದಿಲ್ಲ. ಮುಂಜಾನೆಯೇ ಬೇರೆ, ಬೇರೆ ಊರುಗಳಿಂದ ಮೆಜೆಸ್ಟಿಕ್ಗೆ ಆಗಮಿಸುತ್ತಿರುವ ಜನರು ಆಟೋಗಳು ಇಲ್ಲದೆ ಬಿಎಂಟಿಸಿ ಬಸ್ ಗಳತ್ತ ಮುಖ ಮಾಡಿದ್ದಾರೆ.
ಬೆಂಗಳೂರು, ಸೆ.11: ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹಾಗೂ ಬೇಸರ ಹೊರಹಾಕಲು 40ಕ್ಕೂ ಹೆಚ್ಚು ಖಾಸಗಿ ಸಾರಿಗೆ ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದು ರಾತ್ರಿ 12ರಿಂದ ಇಂದು ರಾತ್ರಿ 12ರ ವರೆಗೂ ನಗರದಲ್ಲಿ ಆಟೋ, ಕ್ಯಾಬ್, ವ್ಯಾನ್, ಗೂಡ್ಸ್ ವಾಹನ ಸೇರಿದಂತೆ ಯಾವ ಖಾಸಗಿ ಸಾರಿಗೆ ವಾಹನವೂ ರಸ್ತೆಗೆ ಇಳಿಯುವುದಿಲ್ಲ. ಬೆಂಗಳೂರಿನಲ್ಲಿ ಇಂದು ಖಾಸಗಿ ಸಾರಿಗೆ ಒಕ್ಕೂಟದಿಂದ ಮುಷ್ಕರ ಮಾಡುತ್ತಿದ್ದು ಖಾಸಗಿ ಸಾರಿಗೆ ಮುಷ್ಕರಕ್ಕೆ ಮೆಜೆಸ್ಟಿಕ್ ಆಟೋ ಸಂಘ ಬೆಂಬಲ ಸೂಚಿಸಿದೆ. ಹೀಗಾಗಿ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಆಟೋ ನಿಲ್ದಾಣದಲ್ಲಿ ಒಂದು ಆಟೋ ಕೂಡ ಕಂಡು ಬಂದಿಲ್ಲ.
ಮುಂಜಾನೆಯೇ ಬೇರೆ, ಬೇರೆ ಊರುಗಳಿಂದ ಮೆಜೆಸ್ಟಿಕ್ಗೆ ಆಗಮಿಸುತ್ತಿರುವ ಜನರು ಆಟೋಗಳು ಇಲ್ಲದೆ ಬಿಎಂಟಿಸಿ ಬಸ್ ಗಳತ್ತ ಮುಖ ಮಾಡಿದ್ದಾರೆ. ಲಗೇಜ್ ಹೆಚ್ಚಿದೆ ಬಸ್ನಲ್ಲಿ ಹೋಗಲು ಆಗದು, ಆಟೋನೇ ಬೇಕು ಎನ್ನುವವರಿಗೆ ಭಾರಿ ಸಮಸ್ಯೆ ಎದುರಾಗಿದೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್ಗೆ ಸೂಚನೆ

