ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಮುಷ್ಕರ; ಹೇಗಿದೆ ಎಫೆಕ್ಟ್? ಮೆಜೆಸ್ಟಿಕ್​ನಲ್ಲಿ ಹೇಗಿದೆ ಸಂಚಾರ?

| Updated By: ಆಯೇಷಾ ಬಾನು

Updated on: Sep 11, 2023 | 8:00 AM

ಬೆಂಗಳೂರಿನಲ್ಲಿ ಇಂದು ಖಾಸಗಿ ಸಾರಿಗೆ ಒಕ್ಕೂಟದಿಂದ ಮುಷ್ಕರ ಮಾಡುತ್ತಿದ್ದು ಖಾಸಗಿ ಸಾರಿಗೆ ಮುಷ್ಕರಕ್ಕೆ ಮೆಜೆಸ್ಟಿಕ್​ ಆಟೋ ಸಂಘ ಬೆಂಬಲ ಸೂಚಿಸಿದೆ. ಹೀಗಾಗಿ ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಆಟೋ ನಿಲ್ದಾಣದಲ್ಲಿ ಒಂದು ಆಟೋ ಕೂಡ ಕಂಡು ಬಂದಿಲ್ಲ. ಮುಂಜಾನೆಯೇ ಬೇರೆ, ಬೇರೆ ಊರುಗಳಿಂದ ಮೆಜೆಸ್ಟಿಕ್​ಗೆ ಆಗಮಿಸುತ್ತಿರುವ ಜನರು ಆಟೋಗಳು ಇಲ್ಲದೆ ಬಿಎಂಟಿಸಿ ಬಸ್ ಗಳತ್ತ ಮುಖ ಮಾಡಿದ್ದಾರೆ.

ಬೆಂಗಳೂರು, ಸೆ.11: ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹಾಗೂ ಬೇಸರ ಹೊರಹಾಕಲು 40ಕ್ಕೂ ಹೆಚ್ಚು ಖಾಸಗಿ ಸಾರಿಗೆ ಸಂಘಟನೆಗಳು ಬೆಂಗಳೂರು ಬಂದ್​ಗೆ ಕರೆ ಕೊಟ್ಟಿದ್ದು ರಾತ್ರಿ 12ರಿಂದ ಇಂದು ರಾತ್ರಿ 12ರ ವರೆಗೂ ನಗರದಲ್ಲಿ ಆಟೋ, ಕ್ಯಾಬ್, ವ್ಯಾನ್, ಗೂಡ್ಸ್ ವಾಹನ ಸೇರಿದಂತೆ ಯಾವ ಖಾಸಗಿ ಸಾರಿಗೆ ವಾಹನವೂ ರಸ್ತೆಗೆ ಇಳಿಯುವುದಿಲ್ಲ. ಬೆಂಗಳೂರಿನಲ್ಲಿ ಇಂದು ಖಾಸಗಿ ಸಾರಿಗೆ ಒಕ್ಕೂಟದಿಂದ ಮುಷ್ಕರ ಮಾಡುತ್ತಿದ್ದು ಖಾಸಗಿ ಸಾರಿಗೆ ಮುಷ್ಕರಕ್ಕೆ ಮೆಜೆಸ್ಟಿಕ್​ ಆಟೋ ಸಂಘ ಬೆಂಬಲ ಸೂಚಿಸಿದೆ. ಹೀಗಾಗಿ ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಆಟೋ ನಿಲ್ದಾಣದಲ್ಲಿ ಒಂದು ಆಟೋ ಕೂಡ ಕಂಡು ಬಂದಿಲ್ಲ.

ಮುಂಜಾನೆಯೇ ಬೇರೆ, ಬೇರೆ ಊರುಗಳಿಂದ ಮೆಜೆಸ್ಟಿಕ್​ಗೆ ಆಗಮಿಸುತ್ತಿರುವ ಜನರು ಆಟೋಗಳು ಇಲ್ಲದೆ ಬಿಎಂಟಿಸಿ ಬಸ್ ಗಳತ್ತ ಮುಖ ಮಾಡಿದ್ದಾರೆ. ಲಗೇಜ್ ಹೆಚ್ಚಿದೆ ಬಸ್​ನಲ್ಲಿ ಹೋಗಲು ಆಗದು, ಆಟೋನೇ ಬೇಕು ಎನ್ನುವವರಿಗೆ ಭಾರಿ ಸಮಸ್ಯೆ ಎದುರಾಗಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ