ಬೆಂಗಳೂರಿನ ಬಯೋ ಇನ್ನೋವೇಶನ್ ಸೆಂಟರ್‌ನಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬಯೋ ಇನ್ನೋವೇಶನ್ ಸೆಂಟರ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಾಸಾಯನಿಕ ಕ್ರಿಯೆಯಿಂದ ಬೆಂಕಿ ಹತ್ತಿರುವ ಶಂಕೆ ಇದೆ. ಸುಮಾರು 70% ಕೇಂದ್ರ ಹಾನಿಗೊಳಗಾಗಿದೆ. ಅದೃಷ್ಟವಶಾತ್, ಯಾವುದೇ ಪ್ರಾಣಹಾನಿಯಾಗಿಲ್ಲ. ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಎಲೆಕ್ಟ್ರಾನಿಕ್ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು, ಜನವರಿ 14: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಬಯೋ ಇನ್ನೋವೇಶನ್ ಸೆಂಟರ್‌ನಲ್ಲಿ (Bangalore Bioinnovation Centre) ಅಗ್ನಿ ಅವಘಡ ಸಂಭವಿಸಿದೆ. ಕೆಮಿಕಲ್ ರಿಯಾಕ್ಷನ್ನಿಂದ ಬೆಂಕಿ ಹತ್ತಿದೆ ಎಂದು ಶಂಕಿಸಲಾಗಿದೆ. ನಸುಕಿನ ಜಾವ 5 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಉದ್ಯೋಗಿಗಗಳು ಹೊರಗೆ ಓಡಿ ಬಂದಿದ್ದಾರೆ. ಅದೃಷ್ಟವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.
ಸರ್ಕಾರ ಅಧೀನದ ಬಯೋ ಇನ್ನೋವೇಷನ್ ಸೆಂಟರ್ ಶೇಕಡಾ 70ರಷ್ಟು ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಎಲೆಕ್ಟ್ರಾನಿಕ್ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಸ ಹೊಸ ಔಷಧಿ ತಯಾರಿಕೆಗಾಗಿ ಇರುವ ಲ್ಯಾಬ್ಗಳಲ್ಲಿ ಬೇರೆ ಬೇರೆ ರೀತಿಯಾದ ಪ್ರಯೋಗಗಳು ನಡೆಯುತ್ತಿರುತ್ತೆರುತ್ತವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jan 14, 2025 11:58 AM