ಮೆಟ್ರೋ ಪ್ರಯಾಣಿಕರೇ ಗಮನಿಸಿ: ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್
ಬೆಂಗಳೂರಿನ ನಮ್ಮ ಮೆಟ್ರೋದ ಯೆಲ್ಲೋ ಮಾರ್ಗದಲ್ಲಿ ಭಾನುವಾರ ಸಂಚಾರ ವಿಳಂಬವಾಗಲಿದೆ. ಭಾನುವಾರ ಬೆಳಗ್ಗೆ 7 ಗಂಟೆಗೆ ಬದಲಾಗಿ 8 ಗಂಟೆಗೆ ಯೆಲ್ಲೋ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಲಿವೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಅರ್ಸಿಎಲ್ ತಿಳಿಸಿದೆ.
ಬೆಂಗಳೂರು, ಡಿಸೆಂಬರ್ 20: ಬೆಂಗಳೂರಿನ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಭಾನುವಾರ (ಡಿಸೆಂಬರ್ 21) ಮೆಟ್ರೋ ರೈಲು ಸಂಚಾರ ವಿಳಂಬವಾಗಿ ಶುರುವಾಗಲಿದೆ. ನವೀಕರಣ ಕಾರ್ಯದ ಹಿನ್ನೆಲೆಯಲ್ಲಿ ಬೆಳಗ್ಗೆ ಮೆಟ್ರೋ ಸೇವೆಗಳು ಒಂದು ಗಂಟೆ ತಡವಾಗಿ ಆರಂಭವಾಗಲಿವೆ. ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುವ ಬದಲಾಗಿ, ಯೆಲ್ಲೋ ಲೈನ್ ರೈಲುಗಳು 8 ಗಂಟೆಗೆ ಸಂಚಾರವನ್ನು ಪ್ರಾರಂಭಿಸುತ್ತವೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ ನೀಡಿದೆ.
Published on: Dec 20, 2025 08:41 AM
