ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?

|

Updated on: Sep 04, 2024 | 12:43 PM

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ 3,991 ಚಾರ್ಜಶೀಟ್ ಸಲ್ಲಿಕೆ ಆಗಿದೆ. ಇದರಲ್ಲಿ ರೇಣುಕಾ ಸ್ವಾಮಿ ಕೊಲೆಯ ಇಂಚಿಂಚೂ ಮಾಹಿತಿ ಇದೆ. ಈ ಬಗ್ಗೆ ಕಮಿಷನರ್​ ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಕೇಸ್ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ಪೊಲೀಸರು ಇಂದು (ಸೆಪ್ಟೆಂಬರ್ 4) ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದಾರೆ. ಈ ಬಗ್ಗೆ ಕಮಿಷನರ್​ ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ. ‘ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಸಂಪೂರ್ಣ ಮುಗಿದಿದೆ. 17 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಆಗಿದೆ. 7 ಸಂಪುಟಗಳ, 10 ಕಡತ ಇದೆ. 3991 ಪುಟ ಇದೆ. ಕೊಲೆ ಪ್ರಕರಣದಲ್ಲಿ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. 3 ಸಾಕ್ಷಿದಾರರು ಇದ್ದಾರೆ. ವೈದ್ಯರು, ಆರ್​ಟಿಒ ಅಧಿಕಾರಿಗಳು, 56 ಪೊಲೀಸ್ ಸಿಬ್ಬಂದಿ ಸಾಕ್ಷಿದಾರರಾಗಿದ್ದಾರೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.