ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ
ಬೆಂಗಳೂರಿನಲ್ಲಿ ತಡರಾತ್ರಿಯ ಭಾರಿ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಸುಬ್ಬಯ್ಯ ಸರ್ಕಲ್ ಸಂಪೂರ್ಣ ಜಲಾವೃತವಾಗಿದ್ದು, ಸಿಸಿಬಿ ಕಚೇರಿಗೆ ನೀರು ನುಗ್ಗಿದೆ. ಡಬಲ್ ರೋಡ್‌ನಲ್ಲಿ ಮೊಣಕಾಲಿನಷ್ಟು ನೀರು ನಿಂತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಳಗ್ಗೆ ವಾಹನ ಸವಾರರು ಪರದಾಡುವಂತಾಯಿತು. ಈ ಭಾರಿ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ.
ಬೆಂಗಳೂರು, ಮೇ 01: ಬೆಂಗಳೂರು ನಗರದಲ್ಲಿ ತಡರಾತ್ರಿ ಭಾರಿ ಮಳೆಯಾಗಿದ್ದು, ಸಾಕಷ್ಟು ಅವಾಂತರವಾಗಿದೆ. ಮಳೆಯಿಂದ ನಗರದ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು, ಬೆಳ್ಳಂ ಬೆಳಗ್ಗೆ ವಾಹನ ಸವಾರರು ಪರದಾಡಿದರು. ಮಳೆಗೆ ಸುಬ್ಬಯ್ಯ ಸರ್ಕಲ್ ಬಳಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಭಾರಿ ಮಳೆಗೆ ಶಾಂತಿನಗರದಲ್ಲಿರುವ ಸಿಸಿಬಿ ಕಚೇರಿ ಒಳಗೆ ನೀರು ನುಗ್ಗಿದೆ. ಕಚೇರಿ ಆವರಣದಲ್ಲಿ ಕೆರೆಯಂತಾಗಿದೆ. ಸಿಸಿಬಿ ಕಚೇರಿ ಮುಂಭಾಗದ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಡಬಲ್ ರೋಡ್‌ನಲ್ಲಿ ಮೊಣಕಾಲಿನವರೆಗು ನೀರು ನಿಂತಿದೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಹೀಗೆ, ಬೆಂಗಳೂರಿನ ಹಲವು ರಸ್ತೆಗಳ ಮೇಲೆ ನೀರು ನಿಂತಿದೆ. ಎಲ್ಲೆಲ್ಲಿ ಏನೇನು ಅವಾಂತರ ಸೃಷ್ಟಿಯಾಗಿದೆ? ವಿಡಿಯೋ ನೋಡಿ.