AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಧಾರಾಕಾರ ಮಳೆ: ಬೆಳ್ಳಂಬೆಳಗ್ಗೆಯೇ ಶುರುವಾಯ್ತು ರಗಳೆ

ಬೆಂಗಳೂರಲ್ಲಿ ಧಾರಾಕಾರ ಮಳೆ: ಬೆಳ್ಳಂಬೆಳಗ್ಗೆಯೇ ಶುರುವಾಯ್ತು ರಗಳೆ

Ganapathi Sharma
|

Updated on: Oct 15, 2024 | 9:14 AM

Share

Bangalore Rains: ಸೋಮವಾರ ಬೆಳಗ್ಗೆಯೇ ಬೆಂಗಳೂರಿಗೆ ತಂಪೆರೆದಿದ್ದ ವರುಣ ರಾತ್ರಿಯೂ ಆರ್ಭಟಿಸಿದ್ದಾನೆ. ಸೋಮವಾರ ತಡರಾತ್ರಿಯಿಂದಲೇ ಬೆಂಗಳೂರಿನಲ್ಲಿ ಆರಂಭವಾದ ಮಳೆ ಮಂಗಳವಾರ ಮುಂಜಾನೆ ಇನ್ನಷ್ಟು ಜೋರಾಗಿದೆ. ಬೆಳ್ಳಂಬೆಳಗ್ಗೆಯೇ ಸುರಿದ ಮಳೆಯಿಂದ ಕಚೇರಿಗಳಿಗೆ ತೆರಳುವವರು ಪರದಾಡುವಂತಾಗಿದೆ. ಬೆಂಗಳೂರು ಮಳೆಯ ದೃಶ್ಯ ವೈಭವ ಇಲ್ಲಿದೆ ನೋಡಿ.

ಬೆಂಗಳೂರು, ಅಕ್ಟೋಬರ್ 15: ಬೆಂಗಳೂರಿನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆಯೇ ಧಾರಾಕಾರ ಮಳೆ ಸುರಿಯಿತು. ಬೆಂಗಳೂರಿನ ಮೆಜೆಸ್ಟಿಕ್​, ಕಾರ್ಪೊರೇಷನ್​ ಸರ್ಕಲ್​, ಶಾಂತಿನಗರ, ಕೆ.ಆರ್​.ಮಾರ್ಕೆಟ್​​​, ವಿಧಾನಸೌಧ, ಶಿವಾಜಿನಗರ, ಬಸವನಗುಡಿ, ಜಯನಗರ, ಶ್ರೀನಗರ, ಹನುಮಂತನಗರ, ತ್ಯಾಗರಾಜನಗರ, ಕೋರಮಂಗಲ, ರಿಚ್​ಮಂಡ್​ ಸರ್ಕಲ್​, ಮಲ್ಲೇಶ್ವರಂ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ದಾಸರಹಳ್ಳಿ, ರಾಜಾಜಿನಗರ ಸೇರಿದಂತೆ ಸುತ್ತಮುತ್ತ ಧಾರಾಕಾರ ಮಳೆಯಾಯಿತು.

ಮಕ್ಕಳು ಮತ್ತು ಉದ್ಯೋಗಿಗಳು ತುಂತುರು ಮಳೆಯಲ್ಲಿಯೇ ನೆನೆದುಕೊಂಡು ಸ್ಕೂಲ್, ಕಾಲೇಜು, ಕೆಲಸಕ್ಕೆ ಹೋಗುತ್ತಿದ್ದಾರೆ. ಕಾರ್ಪೋರೇಷನ್ ಸರ್ಕಲ್ ಸುತ್ತಮುತ್ತ ತುಂತುರು ಮಳೆ ಇನ್ನೂ ಸುರಿಯುತ್ತಿದ್ದು, ಮಳೆಗೆ ವಾಹನ ಸವಾರರು, ಪಾದಚಾರಿಗಳು ಪರದಾಟಪಡುವಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ