ಬೆಂಗಳೂರು ಮಳೆ: ಮಾನ್ಯತಾ ಟೆಕ್ ಪಾರ್ಕ್ ಮುಖ್ಯ ರಸ್ತೆ ಜಲಾವೃತಗೊಳ್ಳಲು ಕಾರಣ ಇದುವೇ ನೋಡಿ!

| Updated By: Ganapathi Sharma

Updated on: Oct 16, 2024 | 9:33 AM

ಬೆಂಗಳೂರು ಮಳೆ ಅವಾಂತರಕ್ಕೆ ಹಲವು ಕಡೆ ಅಪಾರ್ಟ್​​ಮೆಂಟ್​ಗಳಿಗೆ ನೀರು ನುಗ್ಗಿದೆ. ಇನ್ನು ಅನೇಕ ಕಡೆಗಳಲ್ಲಿ ರಸ್ತೆಗಳಲ್ಲಿ ನೀರು ನಿಂತು ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಈ ಮಧ್ಯೆ, ಮಾನ್ಯತಾ ಟೆಕ್ ಪಾರ್ಕ್ ಮುಖ್ಯ ರಸ್ತೆ ಜಲಾವೃತಗೊಂಡು ಇಡೀ ದಿನ ಸಂಚಾರಕ್ಕೆ ಹರಸಾಹಸಪಡುವಂತಾಗಿತ್ತು. ಇದಕ್ಕೆ ಮುಖ್ಯ ಕಾರಣ ಏನೆಂಬುದು ಗೊತ್ತಾಗಿದೆ.

ಬೆಂಗಳೂರು, ಅಕ್ಟೋಬರ್ 16: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮವಾಗಿ ಅನೇ ಕಡೆಗಳಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದ್ದು, ಮಾನ್ಯತಾ ಟೆಕ್ ಪಾರ್ಕ್ ರಸ್ತೆ ಜಲಾವೃತಗೊಂಡಿದೆ. ಮಾನ್ಯತಾ ಟೆಕ್ ಪಾರ್ಕ್ ಆವರಣದ ಮುಂಭಾಗದಲ್ಲಿರುವ ನಿರ್ಮಾಣ ಹಂತದ ಬಹುಮಹಡಿ ಕಟ್ಟದಲ್ಲಿ ಮಣ್ಣು ಕುಸಿತ ಸಂಭವಿಸಿದೆ. ಪರಿಣಾಮವಾಗಿ ಬೃಹತ್ ಮರವೊಂದು ಆವರಣದ ಒಳಗೆ ಬಿದ್ದಿದೆ. ಅಲ್ಲದೆ, ಮಳೆ ನೀರು ಸರಾಗವಾಗಿ ಹರಿದುಹೋಗಲು ವ್ಯವಸ್ಥೆ ಇಲ್ಲವಾಗಿದೆ. ಇದರಿಂದಾಗಿ ಮಾನ್ಯತಾ ಟೆಕ್ ಪಾರ್ಕ್ ಅಕ್ಷರಶಃ ಕೆರೆಯಂತಾಗಿದ್ದು, ಸೋಮವಾರ ನಾಲ್ಕೈದು ಅಡಿ ಎತ್ತರಕ್ಕೆ ನೀರು ನಿಂತುಕೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ