Republic Day: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಗಣರಾಜ್ಯೋತ್ಸವ ಸಂಭ್ರಮದ ಲೈವ್
ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿ, ಭಾಷಣ ಮಾಡಲಿದ್ದಾರೆ. ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಬಹುಮಾನ ವಿತರಣೆ ಕಾರ್ಯಕ್ರಮದ ಮುಖ್ಯಾಂಶಗಳಾಗಿವೆ. ರಾಷ್ಟ್ರಗೀತೆ ಮತ್ತು ನಾಡಗೀತೆಯೊಂದಿಗೆ ಕಾರ್ಯಕ್ರಮ ಸಮಾರೋಪಗೊಳ್ಳಲಿದೆ.
ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಬಳಿಕ ಪೋಲಿಸ್ ಬ್ಯಾಂಡ್ ತಂಡದಿಂದ ರಾಷ್ಟ್ರಗೀತೆ ನೆರವೇರಿತು. ರಾಜ್ಯವನ್ನು ಉದ್ದೇಶಿಸಿ ಭಾಷಣ ಮಾಡಿದರು. ಪಥ ಸಂಚಲನ ನಡೆಯಿತು. ನಂತರ ನಾಡಗೀತೆ ಮತ್ತು ರೈತಗೀತೆ ಹಾಡಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗಿದೆ. ಕೊನೆಗೆ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.
Published on: Jan 26, 2025 08:52 AM
Latest Videos