ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
Bangalore traffic advisroy for IPL Cricket Match: ಐಪಿಎಲ್ ಪಂದ್ಯ ವೀಕ್ಷಿಸಲು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವವರಿಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಸಂಚಾರ ಸಲಹೆ ನೀಡಿದ್ದಾರೆ. ಎಲ್ಲಿ ವಾಹನ ನಿಲುಗಡೆ ಮಾಡಬೇಕು? ಎಲ್ಲೆಲ್ಲಿ ನೋ ಪಾರ್ಕಿಂಗ್? ಸಾರ್ವಜನಿಕ ಸಾರಿಗೆಯಲ್ಲಿ ಹೋಗುವವರು ಏನು ಗಮನಿಸಬೇಕು ಎಂಬ ಮಾಹಿತಿ ಇಲ್ಲಿದೆ.
ಬೆಂಗಳೂರು, ಏಪ್ರಿಲ್ 2: ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಲ್ ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯ ನಡೆಯುತ್ತಿದೆ. ಮಾತ್ರವಲ್ಲದೆ, ಇನ್ನೂ ಕೆಲವು ಐಪಿಎಲ್ ಪಂದ್ಯಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಕ್ರಿಕೆಟ್ ವೀಕ್ಷಿಸಲು ಹೋಗುವವರು ಗಮನಿಸಲೇಬೇಕಾದ ಕೆಲವು ಸಂಚಾರ ಸಲಹೆಗಳನ್ನು ಇಲ್ಲಿ ನೀಡಲಾಗಿದೆ. ಹೆಚ್ಚಿನ ವಿವರಗಳಿಗೆ ಬೆಂಗಳೂರು ಟ್ರಾಫಿಕ್ ಪೊಲೀಸ್ ಪ್ರಕಟಿಸಿರುವ ಈ ವಿಡಿಯೋವನ್ನು ಗಮನಿಸಿ.
ಇನ್ನಷ್ಟು ವಿವರಗಳಿಗೆ ಓದಿ: ಬೆಂಗಳೂರಿನಲ್ಲಿ ಆರ್ಸಿಬಿ ಪಂದ್ಯ; ಪಾರ್ಕಿಂಗ್ ವಿವರ, ಸಂಚಾರ ಸಲಹೆ ಇಲ್ಲಿದೆ