ಗವರ್ನರ್ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಅವರ ಸಂಚಾರಕ್ಕಾಗಿ ಬೆಂಗಳೂರಿನಲ್ಲಿ ರಸ್ತೆಯನ್ನು ಬಂದ್ ಮಾಡಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಚಾರ ದಟ್ಟಣೆಯಲ್ಲಿ ಸಿಲುಕಿದ ಓರ್ವ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಯ ಬಗ್ಗೆ ಆತಂಕ ವ್ಯಕ್ತಪಡಿಸಿ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. 30 ನಿಮಿಷಗಳ ಕಾಲ ರಸ್ತೆ ಬಂದ್ ಮಾಡಿದ್ದನ್ನು ಪ್ರಶ್ನಿಸಿ, ವಿಐಪಿ ಸಂಸ್ಕೃತಿಗೆ ಆಕ್ಷೇಪ ವ್ಯಕ್ತಪಡಿಸಿದರು.
ಬೆಂಗಳೂರು, ಜೂನ್ 1: ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಕ್ಕೆ ವ್ಯಕ್ತಿಯೊಬ್ಬರು ನಡು ಮಾರ್ಗದಲ್ಲಿ ಕುಳಿತು ಪ್ರತಿಭಟಿಸಿದ ಘಟನೆ ಬೆಂಗಳೂರಿನ ಹೆಚ್ಎಎಲ್ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿ ನಡೆದಿದೆ. ಇದೇ ವೇಳೆ ಬಳಿ ಬಂದ ಟ್ರಾಫಿಕ್ ಪೊಲೀಸರ ಬಳಿ, ‘ನನ್ನ ಪತ್ನಿ ಗರ್ಭಿಣಿ, ಈಗ ಹೇಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ಸಂಚಾರಕ್ಕಾಗಿ ಸುಮಾರು 30 ನಿಮಿಷ ಪೊಲೀಸರು ಟ್ರಾಫಿಕ್ ಬಂದ್ ಮಾಡಿದ್ದರು. ಇದರಿಂದ ವ್ಯಕ್ತಿ ಕೆರಳಿದ್ದರು. ನಂತರ ವ್ಯಕ್ತಿಯನ್ನು ಪೊಲೀಸರು ಸಮಾಧಾನಪಡಿಸಿ ಕಳುಹಿಸಿದ್ದಾರೆ.
ವರದಿ: ವಿಕಾಸ್, ಟಿವಿ9 ಬೆಂಗಳೂರು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ

