ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

Updated on: Jun 01, 2026 | 12:28 PM

ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಅವರ ಸಂಚಾರಕ್ಕಾಗಿ ಬೆಂಗಳೂರಿನಲ್ಲಿ ರಸ್ತೆಯನ್ನು ಬಂದ್ ಮಾಡಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಚಾರ ದಟ್ಟಣೆಯಲ್ಲಿ ಸಿಲುಕಿದ ಓರ್ವ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಯ ಬಗ್ಗೆ ಆತಂಕ ವ್ಯಕ್ತಪಡಿಸಿ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. 30 ನಿಮಿಷಗಳ ಕಾಲ ರಸ್ತೆ ಬಂದ್ ಮಾಡಿದ್ದನ್ನು ಪ್ರಶ್ನಿಸಿ, ವಿಐಪಿ ಸಂಸ್ಕೃತಿಗೆ ಆಕ್ಷೇಪ ವ್ಯಕ್ತಪಡಿಸಿದರು.

ಬೆಂಗಳೂರು, ಜೂನ್ 1: ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್​ಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಕ್ಕೆ ವ್ಯಕ್ತಿಯೊಬ್ಬರು ನಡು ಮಾರ್ಗದಲ್ಲಿ ಕುಳಿತು ಪ್ರತಿಭಟಿಸಿದ ಘಟನೆ ಬೆಂಗಳೂರಿನ ಹೆಚ್​ಎಎಲ್​ ಓಲ್ಡ್ ಏರ್​ಪೋರ್ಟ್ ರಸ್ತೆಯಲ್ಲಿ ನಡೆದಿದೆ. ಇದೇ ವೇಳೆ ಬಳಿ ಬಂದ ಟ್ರಾಫಿಕ್ ಪೊಲೀಸರ ಬಳಿ, ‘ನನ್ನ ಪತ್ನಿ ಗರ್ಭಿಣಿ, ಈಗ ಹೇಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ಸಂಚಾರಕ್ಕಾಗಿ ಸುಮಾರು 30 ನಿಮಿಷ ಪೊಲೀಸರು ಟ್ರಾಫಿಕ್​ ಬಂದ್ ಮಾಡಿದ್ದರು. ಇದರಿಂದ ವ್ಯಕ್ತಿ ಕೆರಳಿದ್ದರು. ನಂತರ ವ್ಯಕ್ತಿಯನ್ನು ಪೊಲೀಸರು ಸಮಾಧಾನಪಡಿಸಿ ಕಳುಹಿಸಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More