ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ನಮ್ಮ ಮೆಟ್ರೋದ ವಿಧಾನಸೌಧ ನಿಲ್ದಾಣದಲ್ಲಿ ಯುವತಿಯೊಬ್ಬಳಿಗೆ ಅಪರಿಚಿತ ವ್ಯಕ್ತಿ ಅಸಭ್ಯ ವರ್ತನೆ ತೋರಿದ್ದಾನೆಂದು ಆರೋಪಿಸಲಾಗಿದೆ. ಯುವತಿಯ ದೂರಿನಂತೆ ಭದ್ರತಾ ಸಿಬ್ಬಂದಿ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು NCR ದಾಖಲಿಸಿ ಆರೋಪಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಈ ಬಗ್ಗೆ ಯುವತಿ ವಿಡಿಯೋ ಮೂಲಕ ಮಾಹಿತಿ ನೀಡಿದ್ದಾಳೆ.
ಬೆಂಗಳೂರು, ಡಿಸೆಂಬರ್ 26: ಯುವತಿಯ ಮೈ-ಕೈ ಮುಟ್ಟಿ ಅಪರಿಚಿತ ವ್ಯಕ್ತಿ ಅಸಭ್ಯವಾಗಿ ವರ್ತಿಸಿರುವಂತಹ ಘಟನೆ ನಮ್ಮ ಮೆಟ್ರೋದಲ್ಲಿ ನಡೆದಿದೆ. ವಿಧಾನಸೌಧ ಮೆಟ್ರೋದಿಂದ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಈ ವೇಳೆ ಯುವತಿ ಅಲ್ಲಿದ್ದ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಕೂಡಲೇ ಆ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎನ್ಸಿಆರ್ ದಾಖಲಿಸಿ ವ್ಯಕ್ತಿಗೆ ವಾರ್ನ್ ಮಾಡಿ ಪೊಲೀಸರು ಕಳುಹಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
