ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆಗೆ ಸಿದ್ದತೆ: ಬಿಗಿ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?

ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಎಂ.ಜಿ. ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. 180 ಹೊಸ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಮತ್ತು ಮಹಿಳೆಯರ ಸುರಕ್ಷತೆಗಾಗಿ 15 ಸೇಫ್ಟಿ ಐಲ್ಯಾಂಡ್‌ಗಳು ಮತ್ತು 15 ವಾಚ್ ಟವರ್‌ಗಳನ್ನು ಸ್ಥಾಪಿಸಲಾಗಿದೆ. 500 ಹೋಮ್ ಗಾರ್ಡ್ ಮತ್ತು 700 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಡಿಸಿಪಿಗಳು ಮಧ್ಯರಾತ್ರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು, ಡಿಸೆಂಬರ್​ 29: ವರ್ಷಾಚರಣೆಗೆ (New Year) ಕೌಂಟ್​​ಡೌನ್​​​ ಶುರುವಾಗಿದೆ. ಎಂಜಿ. ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಬ್ರಿಗೇಡ್​ ರಸ್ತೆಯಲ್ಲಿ ಭರ್ಜರಿ ಸಿದ್ಧತೆ ಮಾಡಲಾಗಿದೆ. ಈ ಮಧ್ಯೆ ಸೆಲೆಬ್ರೇಷನ್ ಹಾಟ್ ಸ್ಪಾಟ್​ಗಳಿಗೆ ಮಧ್ಯರಾತ್ರಿ ಭೇಟಿ ನೀಡಿದ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಹೊಸ ವರ್ಷ ಆಚರಣೆ ಪೂರ್ವ ಸಿದ್ದತೆಯ ಭದ್ರತೆ ಪರಿಶೀಲನೆ ಮಾಡಿದ್ದಾರೆ. ಹೊಸ ವರ್ಷದ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಲಾಗಿದ್ದು, ಸಿಸಿ ಕ್ಯಾಮರಾ ಅಳವಡಿಕೆ, ಸಿಬ್ಬಂದಿ ನಿಯೋಜನೆ ಸ್ಥಳಗಳ ಬಗ್ಗೆ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಕಳೆದ ಬಾರಿಗಿಂತ ಈ ಬಾರಿ ಕ್ಯಾಮೆರಾ ಅಳವಡಿಕೆಗೆ ಹೆಚ್ಚು ಒತ್ತು ನೀಡಲಾಗಿದೆ. ಈಗಾಗಲೇ ಇರುವ ಕ್ಯಾಮೆರಾಗಳನ್ನ ಬಿಟ್ಟು 180 ಕ್ಯಾಮೆರಾಗಳನ್ನ ಅಳವಡಿಸಲಾಗಿದೆ. ಮಹಿಳೆಯರ ಸುರಕ್ಷತೆಗೆ 15 ಸೇಫ್ಟಿ ಐಲ್ಯಾಂಡ್, 15 ವಾಚ್ ಟವರ್ ಸ್ಥಾಪಿಸಲಾಗಿದೆ. ಮೂರು ಆಂಬ್ಯುಲೆನ್ಸ್ ಜೊತೆ ಎರಡು ಪ್ರೈಮರಿ ಹೆಲ್ತ್ ಸೆಂಟರ್ ವ್ಯವಸ್ಥೆ. ಕೋರಮಂಗಲ ಬಿಟ್ಟು ಮೈಕೋ ಲೇಔಟ್, HSR ಲೇಔಟ್ ಕಡೆನಲ್ಲೂ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಸದ್ಯಕ್ಕೆ 500ಕ್ಕಿಂತ‌ ಹೆಚ್ಚು ಹೋಂಗಾರ್ಡ್, 700 ಪೊಲೀಸ್ ಸಿಬ್ಬಂದಿ, ಅಧಿಕಾರಿಗಳನ್ನ ಭದ್ರತೆಗೆ ನಿಯೋಜಿಸಲಾಗಿದೆ ಎಂದಿದ್ದಾರೆ.

ವರದಿ: ಪ್ರದೀಪ್​ 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:57 pm, Sun, 29 December 24