ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು

Edited By:

Updated on: Apr 30, 2026 | 7:10 PM

ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಎಂ.ಎಸ್. ಬಿಲ್ಡಿಂಗ್ ಬಳಿಯ ಫುಟ್‌ಪಾತ್ ಕುಸಿದುಬಿದ್ದಿದೆ. ಕಳಪೆ ಕಾಮಗಾರಿಗಳು ಬಯಲಾಗಿವೆ, ಇದರಿಂದಾಗಿ ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚರಿಸುವ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಜೀವ ಕೈಯಲ್ಲಿ ಹಿಡಿದು ನಡೆಯುವಂತಾಗಿದೆ. ಕೇವಲ ಒಂದು ಗಂಟೆಯ ಮಳೆಯಿಂದ ಇಂತಹ ಅನಾಹುತ ಸಂಭವಿಸಿದ್ದು, ಜಿಬಿಎ ಕಳಪೆ ಕಾಮಗಾರಿ ಪ್ರಶ್ನಾರ್ಹವಾಗಿದೆ.

ಬೆಂಗಳೂರು, ಏಪ್ರಿಲ್​ 30: ನಗರದಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆಯಿಂದ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಧಾರಾಕಾರ ಮಳೆಗೆ ಜಿಬಿಎ ಕಳಪೆ ಕಾಮಗಾರಿ ಬಟಾಬಯಲಾಗಿದೆ. ಅದರಲ್ಲೂ ರಾಜ್ಯದ ಆಡಳಿತ ಕೇಂದ್ರವಾಗಿರುವ ವಿಧಾನಸೌಧದ ಸಮೀಪವಿರುವ ಎಂ.ಎಸ್. ಬಿಲ್ಡಿಂಗ್ ಮುಂಭಾಗದ ಫುಟ್‌ಪಾತ್ ಕುಸಿಬಿದ್ದು ಅವಾಂತರ ಸೃಷ್ಟಿಯಾಗಿದೆ. ಕೇವಲ 1 ಗಂಟೆ ಸುರಿದ ಭಾರಿ ಮಳೆಗೆ ಫುಟ್​ಪಾತ್ ಕುಸಿದುಹೋಗಿದೆ. ಪ್ರತಿನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ನಡೆದಾಡುವ ಫುಟ್​ಪಾತ್ ಬಲಿಗಾಗಿ ಕಾದುಕುಳಿತಂತಿದೆ. ಹೀಗಾಗಿ ಜನರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇನ್ನು ಘಟನೆಯಲ್ಲಿ ವಿಧಾನಸೌಧ ಪೊಲೀಸ್ ಠಾಣೆಯ ಮುಂಭಾಗ ಫುಟ್‌ಪಾತ್ ಪಕ್ಕ ನಿಲ್ಲಿಸಿದ್ದ ಪೊಲೀಸ್ ಜೀಪ್ ಒಂದು ಭಾಗಶಃ ಹಳ್ಳಕ್ಕೆ ಹೊರಳಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More