ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಕೆ ಶಿವಕುಮಾರ್ ಏನಂದ್ರು ನೋಡಿ
ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಭೇಟಿಯನ್ನು ಮುಂದೂಡಿದ್ದಾರೆ. ಆರ್ಸಿಬಿ ಅಭಿಮಾನಿಗಳ ಸಾವು ಪ್ರಕರಣದ ತನಿಖೆ ನಡೆಯುತ್ತಿದೆ. ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸಲು ಅವರು ದೆಹಲಿಯಿಂದ ವಾಪಸ್ಸಾಗುತ್ತಿದ್ದಾರೆ. ಜೂನ್ 18 ರಂದು ಮತ್ತೆ ದೆಹಲಿಗೆ ಭೇಟಿ ನೀಡುವುದಾಗಿ ಡಿಕೆಶಿ ಹೇಳಿದ್ದಾರೆ.
ನವದೆಹಲಿ, ಜೂನ್ 09: ಕಾಲ್ತುಳಿತದಿಂದ ಆರ್ಸಿಬಿ 11 ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಿದೆ. ಇನ್ನು ಆರ್ಸಿಬಿ ವಿಜಯೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ರಾಜ್ಯಪಾಲರ ಆಹ್ವಾನ ಬಗ್ಗೆ ಅವರನ್ನೇ ಕೇಳಿ. ಪ್ರಕರಣದ ಬಗ್ಗೆ ನ್ಯಾ.ಕುನ್ಹಾ ನೇತೃತ್ವದ ತಂಡ ತನಿಖೆ ಮಾಡುತ್ತಿದೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.