ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಕೆ ಶಿವಕುಮಾರ್ ಏನಂದ್ರು ನೋಡಿ

ಮಹೇಶ್ ಇ, ಭೂಮನಹಳ್ಳಿ Edited By:

Updated on: Jun 09, 2025 | 11:55 AM

ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಭೇಟಿಯನ್ನು ಮುಂದೂಡಿದ್ದಾರೆ. ಆರ್​ಸಿಬಿ ಅಭಿಮಾನಿಗಳ ಸಾವು ಪ್ರಕರಣದ ತನಿಖೆ ನಡೆಯುತ್ತಿದೆ. ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸಲು ಅವರು ದೆಹಲಿಯಿಂದ ವಾಪಸ್ಸಾಗುತ್ತಿದ್ದಾರೆ. ಜೂನ್ 18 ರಂದು ಮತ್ತೆ ದೆಹಲಿಗೆ ಭೇಟಿ ನೀಡುವುದಾಗಿ ಡಿಕೆಶಿ ಹೇಳಿದ್ದಾರೆ.

ನವದೆಹಲಿ, ಜೂನ್​​ 09: ಕಾಲ್ತುಳಿತದಿಂದ ಆರ್​ಸಿಬಿ 11 ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಿದೆ. ಇನ್ನು ಆರ್​ಸಿಬಿ ವಿಜಯೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಭಾಗವಹಿಸಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ರಾಜ್ಯಪಾಲರ ಆಹ್ವಾನ ಬಗ್ಗೆ ಅವರನ್ನೇ ಕೇಳಿ. ಪ್ರಕರಣದ ಬಗ್ಗೆ ನ್ಯಾ.ಕುನ್ಹಾ ನೇತೃತ್ವದ ತಂಡ ತನಿಖೆ ಮಾಡುತ್ತಿದೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...