AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬಕ್ಕೆ ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ

ಹಬ್ಬಕ್ಕೆ ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ

Kiran Surya
| Edited By: |

Updated on: Mar 18, 2026 | 5:36 PM

Share

ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆ ಬಿದ್ದ ಮಹಿಳೆಯೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಮುಂದೆ ಚಲಿಸುತ್ತಿದ್ದಾಗ, ಸಹ ಪ್ರಯಾಣಿಕರು ತಕ್ಷಣ ಎಚ್ಚೆತ್ತು ಬಸ್ ನಿಲ್ಲಿಸಲು ಕೂಗಿದ ಕಾರಣ ಮಹಿಳೆ ಚಕ್ರಕ್ಕೆ ಸಿಲುಕುವ ಭಾರಿ ದುರಂತ ತಪ್ಪಿದಂತಾಗಿದೆ. ಅವರ ಸಮಯಪ್ರಜ್ಞೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಬೆಂಗಳೂರು, ಮಾರ್ಚ್​ 18: ಯುಗಾದಿ ಮತ್ತು ರಂಜಾನ್ ಹಬ್ಬ ಹಿನ್ನೆಲೆ ಇಂದು ಮಧ್ಯಾಹ್ನದಿಂದಲೇ ಜನರು ತಮ್ಮ ಊರಿಗೆ ಹೊರಟ್ಟಿದ್ದಾರೆ. ಹೀಗಾಗಿ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್​ನಲ್ಲಿ ಕಿಕ್ಕಿರಿದು ತುಂಬಿದ್ದಾರೆ. ಬಸ್​ಗಳು ಬರುತ್ತಿದ್ದಂತೆ ಕಿಟಕಿ ಮೂಲಕ ಬ್ಯಾಗ್ ಗಳನ್ನು ಹಾಕಿ ಸೀಟ್​ ಪ್ರಯಾಣಿಕರು ಮುಂದಾಗಿದ್ದಾರೆ. ಇದೇ ವೇಳೆ ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಓರ್ವ ಮಹಿಳೆ ಕೆಳಗೆಬಿದಿದ್ದಾರೆ. ಸರ್ಕಾರಿ ಬಸ್ ಮುಂದೆ ಚಲಿಸುವಾಗ ಮಹಿಳೆ ಆಯತಪ್ಪಿಬಿದಿದ್ದಾರೆ. ಸಹ ಪ್ರಯಾಣಿಕರ ಸಮಯ ಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us