ಉರುಸ್ ಮೆರವಣಿಗೆ ವೇಳೆ ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರ ಮೇಲೆ ಹಲ್ಲೆ
ಬಂಗಾರಪೇಟೆ ಉರುಸ್ ವೇಳೆ ನೈತಿಕ ಪೊಲೀಸ್‌ಗಿರಿ ಘಟನೆ ನಡೆದಿದೆ. ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ. ಚಾಂದಿನಿ ದೂರಿನ ಮೇರೆಗೆ 10 ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಾಗಿದೆ. ಕೆಜಿಎಫ್ ಎಸ್ಪಿ ಸ್ಥಳಕ್ಕೆ ಭೇಟಿ ನೀಡಿದ್ದು, ಬಂಗಾರಪೇಟೆ ಪೊಲೀಸರಿಂದ ತನಿಖೆ ಮುಂದುವರಿದಿದೆ. ಸಮಾಜದಲ್ಲಿ ಇಂತಹ ಘಟನೆಗಳು ಶಾಂತಿ ಕದಡುತ್ತವೆ.
ಕೋಲಾರ, ಜ.22: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ದರ್ಗಾ ಮೈದಾನದಲ್ಲಿ ನಡೆಯುತ್ತಿರುವ ಉರುಸ್ ಮೆರವಣಿಗೆಯ ವೇಳೆ ನೈತಿಕ ಪೊಲೀಸ್‌ಗಿರಿ ನಡೆದ ಘಟನೆ ವರದಿಯಾಗಿದೆ.ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಎಂಬ ಕಾರಣಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮುಸ್ಲಿಂ ಯುವಕರು ಹಿಂದೂ ಯುವಕರ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ. ಮುಸ್ಲಿಂ ಯುವಕ-ಯುವತಿಯರ ಜೊತೆಗಿದ್ದ ಹಿಂದೂ ಯುವಕರ ಮೇಲೆ ದಾಳಿ ನಡೆದಿದೆ. ಘಟನೆ ಸಂಬಂಧ ಮುಸ್ಲಿಂ ಯುವತಿ ಚಾಂದಿನಿ ನೀಡಿದ ದೂರಿನ ಆಧಾರದ ಮೇಲೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಜಹೀದ್, ಅಬೀದ್ ಅಹ್ಮದ್, ಶೇಕ್ ಸಕೀಬ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದುವರೆಗೆ ಹತ್ತು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ದೂರುದಾರ ಚಾಂದಿನಿ ತನ್ನ ಅಣ್ಣ ರಫೀ ಜೊತೆಗೆ ಇದ್ದಾಗ, ಅವರೊಂದಿಗೆ ಇದ್ದ ರಾಹುಲ್, ಪುರುಶೋತಮ್, ಲಾವಣ್ಯ ಮತ್ತು ಸಂಜಯ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಘಟನೆಯ ಮಾಹಿತಿ ಪಡೆದ ಬಳಿಕ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮುಂದಿನ ತನಿಖೆ ನಡೆಯುತ್ತಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

