Video: ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು

Updated on: Jul 21, 2025 | 2:51 PM

ಬಾಂಗ್ಲಾದೇಶ ವಾಯುಪಡೆಯ ತರಬೇತಿ ನಿರತ ವಿಮಾನವು ಢಾಕಾದ ಉತ್ತರ ಪ್ರದೇಶದ ಮೈಲ್‌ಸ್ಟೋನ್ ಕಾಲೇಜು ಆವರಣಕ್ಕೆ ಅಪ್ಪಳಿಸಿದ ಪರಿಣಾಮ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ. F-7 BGI ತರಬೇತಿ ಜೆಟ್ ಎಂದು ಗುರುತಿಸಲಾದ ವಿಮಾನವು, ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಸುಮಾರು ಮಧ್ಯಾಹ್ನ 1.06 ಕ್ಕೆ ಡಯಾಬರಿ ಪ್ರದೇಶದ ಕಾಲೇಜು ಆವರಣಕ್ಕೆ ಅಪ್ಪಳಿಸಿತು.

ಢಾಕಾ, ಜುಲೈ 21: ಬಾಂಗ್ಲಾದೇಶ ವಾಯುಪಡೆಯ ತರಬೇತಿ ನಿರತ ವಿಮಾನವು ಢಾಕಾದ ಉತ್ತರ ಪ್ರದೇಶದ ಮೈಲ್‌ಸ್ಟೋನ್ ಕಾಲೇಜು ಆವರಣಕ್ಕೆ ಅಪ್ಪಳಿಸಿದ ಪರಿಣಾಮ  ಒಬ್ಬರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದು ಚೀನಾ ನಿರ್ಮಿತ ವಿಮಾನವಾಗಿದೆ.  ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ. F-7 BGI ತರಬೇತಿ ಜೆಟ್ ಎಂದು ಗುರುತಿಸಲಾದ ವಿಮಾನವು, ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಸುಮಾರು ಮಧ್ಯಾಹ್ನ 1.06 ಕ್ಕೆ ಡಯಾಬರಿ ಪ್ರದೇಶದ ಕಾಲೇಜು ಆವರಣಕ್ಕೆ ಅಪ್ಪಳಿಸಿತು. ಅಪಘಾತದ ಸ್ಥಳದಿಂದ ದಟ್ಟವಾದ ಹೊಗೆ ಏರುತ್ತಿರುವುದು ಕಂಡುಬಂದಿದೆ. ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಪ್ರಸ್ತುತ ಸ್ಥಳದಲ್ಲಿದೆ ಹುಡುಕಾಟ ನಡೆಸುತ್ತಿವೆ. ಘಟನೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jul 21, 2025 02:48 PM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More