ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಯೋಧರು ಸಾವು

Updated on: Sep 09, 2026 | 11:11 PM

ಬಾಂಗ್ಲಾದೇಶದ ಚಟ್ಟೋಗ್ರಾಮ್‌ನಲ್ಲಿ ಇಂದು ನಡೆದ ಸೇನಾ ಫೈರಿಂಗ್ ಅಭ್ಯಾಸದ ವೇಳೆ ಚೀನಾ ನಿರ್ಮಿತ ಟ್ಯಾಂಕ್ ಸ್ಫೋಟಗೊಂಡು ಬಾಂಗ್ಲಾದೇಶ ಸೇನೆಯ ಇಬ್ಬರು ಯೋಧರು ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಒಬ್ಬರು ಸೇನಾಧಿಕಾರಿ ತೀವ್ರವಾಗಿ ಗಾಯಗೊಂಡಿದ್ದಾರೆ. ಹಠಾಜಾರಿ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಮಿಲಿಟರಿ ಅಭ್ಯಾಸ ನಡೆಯುತ್ತಿದ್ದಾಗ ಯೋಧರು ಟ್ಯಾಂಕ್‌ನಿಂದ ಫೈರಿಂಗ್ ನಡೆಸಿದ ತಕ್ಷಣ ಈ ದುರಂತ ಸಂಭವಿಸಿದೆ ಎಂದು ಬಾಂಗ್ಲಾದೇಶದ 'ಇಂಟರ್-ಸರ್ವಿಸಸ್ ಪಬ್ಲಿಕ್ ರಿಲೇಶನ್ಸ್ ಡೈರೆಕ್ಟರೇಟ್' ಖಚಿತಪಡಿಸಿದೆ.

ನವದೆಹಲಿ, ಸೆಪ್ಟೆಂಬರ್ 9: ಬಾಂಗ್ಲಾದೇಶದ ಚಟ್ಟೋಗ್ರಾಮ್‌ನಲ್ಲಿ ಇಂದು ನಡೆದ ಸೇನಾ ಫೈರಿಂಗ್ ಅಭ್ಯಾಸದ ವೇಳೆ ಚೀನಾ ನಿರ್ಮಿತ ಟ್ಯಾಂಕ್ ಸ್ಫೋಟಗೊಂಡು ಬಾಂಗ್ಲಾದೇಶ ಸೇನೆಯ ಇಬ್ಬರು ಯೋಧರು ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಒಬ್ಬರು ಸೇನಾಧಿಕಾರಿ ತೀವ್ರವಾಗಿ ಗಾಯಗೊಂಡಿದ್ದಾರೆ. ಹಠಾಜಾರಿ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಮಿಲಿಟರಿ ಅಭ್ಯಾಸ ನಡೆಯುತ್ತಿದ್ದಾಗ ಯೋಧರು ಟ್ಯಾಂಕ್‌ನಿಂದ ಫೈರಿಂಗ್ ನಡೆಸಿದ ತಕ್ಷಣ ಈ ದುರಂತ ಸಂಭವಿಸಿದೆ ಎಂದು ಬಾಂಗ್ಲಾದೇಶದ ‘ಇಂಟರ್-ಸರ್ವಿಸಸ್ ಪಬ್ಲಿಕ್ ರಿಲೇಶನ್ಸ್ ಡೈರೆಕ್ಟರೇಟ್’ ಖಚಿತಪಡಿಸಿದೆ. ಸ್ಫೋಟದ ತೀವ್ರತೆಗೆ ಟ್ಯಾಂಕ್ ಒಳಗಿದ್ದ ಇಬ್ಬರು ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಅಧಿಕಾರಿಗೆ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More