Shivamogga; ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಲಂಬಾಣಿ ಸಮುದಾಯದ ಕೊಡುಗೆ ಬಹಳ ದೊಡ್ಡದು: ಬಂಜಾರಾ ಸಮುದಾಯದ ಮುಖಂಡ

ಅರುಣ್​ ಕುಮಾರ್​ ಬೆಳ್ಳಿ

Updated on: Mar 27, 2023 | 6:53 PM

ಅವರನ್ನು ಸಿಎಂ ಮಾಡಲು ನಾವು ಚಂದಾ ಎತ್ತಿ ಸಹಾಯ ಮಾಡಿದ್ದೇವೆ ಎಂದು ಹೇಳಿದ ಅವರು ಇದು ಟೀಸರ್ ಮಾತ್ರ ಪಿಕ್ಚರ್ ಇನ್ನೂ ದೊಡ್ಡದಿದೆ ಎಂದರು.

ಶಿವಮೊಗ್ಗ: ಲಂಬಾಣಿ ಸಮುದಾಯ ಒಳ ಮೀಸಲಾತಿ (internal reservation) ಜಾರಿ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ (BS Yediyurappa) ವಿರುದ್ಧ ಸಿಡಿದೆದ್ದಿದ್ದಾರೆ. ಶಿಕಾರಿಪುರದಲ್ಲಿರುವ ಯಡಿಯೂರಪ್ಪವರ ಮನೆ ಮೇಲೆ ಕಲ್ಲಿ ತೂರಾಟ ಮಾಡಲಾಗಿದೆ. ಶಿವಮೊಗ್ಗದಲ್ಲಿಂದು ಟಿವಿ9 ಪ್ರತಿನಿಧಿಯೊಂದಿಗೆ ಮಾತಾಡಿದ ಜಿಲ್ಲಾ ಲಂಬಾಣಿ ಸಮುದಾಯದ (Banjara Community) ಮುಖಂಡರೊಬ್ಬರು ಸದಾಶಿವ ಆಯೋಗದ ಶಿಫಾರಸ್ಸುಗಳ ಮೂಲಕ ನಮ್ಮ ಸಮುದಾಯವನ್ನು ಶೋಷಿಸಲಾಗುತ್ತಿದೆ. ಈ ಆಯೋಗದ ಇನ್ನೊಂದು ರೂಪವೇ ಒಳ ಮೀಸಲಾತಿ. ನಮ್ಮ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡುತ್ತಾರೆ ಎಂಬ ಬಲವಾದ ನಿರೀಕ್ಷೆಯನ್ನು ಯಡಿಯೂರಪ್ಪನವರ ಮೇಲಿಟ್ಟಿಕೊಂಡರೂ ಅವರಿಂದ ನಮಗೆ ಮೋಸವಾಯಿತು. ಅವರನ್ನು ಸಿಎಂ ಮಾಡಲು ನಾವು ಚಂದಾ ಎತ್ತಿ ಸಹಾಯ ಮಾಡಿದ್ದೇವೆ ಎಂದು ಹೇಳಿದ ಅವರು ಇದು ಟೀಸರ್ ಮಾತ್ರ ಪಿಕ್ಚರ್ ಇನ್ನೂ ದೊಡ್ಡದಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.