AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಟ್ವಾಳ ಲಾವಣ್ಯ ಕೊಲೆ ಪ್ರಕರಣ: ಆರೋಪಿಯನ್ನು ಬಜರಂಗದಳ ಕಾರ್ಯಕರ್ತನೆಂದು ಬಿಂಬಿಸಿದವರ ವಿರುದ್ಧ ಕೇಸ್ ದಾಖಲು

ಬಂಟ್ವಾಳ ಲಾವಣ್ಯ ಕೊಲೆ ಪ್ರಕರಣ: ಆರೋಪಿಯನ್ನು ಬಜರಂಗದಳ ಕಾರ್ಯಕರ್ತನೆಂದು ಬಿಂಬಿಸಿದವರ ವಿರುದ್ಧ ಕೇಸ್ ದಾಖಲು

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jul 18, 2026 | 7:03 AM

Share

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪೋಸ್ಟ್‌ಗಳನ್ನು ಹಾಕಿದವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿಯ ಫೋಟೋ ಎಡಿಟ್ ಮಾಡಿ, ಕೇಸರಿ ಶಾಲು ಹಾಕಿ ಬಜರಂಗದಳ ಕಾರ್ಯಕರ್ತನೆಂದು ಬಿಂಬಿಸಲಾಗಿತ್ತು. ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶದಿಂದ ಈ ಪೋಸ್ಟ್‌ಗಳನ್ನು ಹಾಕಲಾಗಿತ್ತು ಎಂದು ದೂರು ನೀಡಲಾಗಿದ್ದು, ಕೇಸ್ ದಾಖಲಾಗಿದೆ.

ಮಂಗಳೂರು, ಜುಲೈ 18: ಬಂಟ್ವಾಳದ ಬಿಸಿ ರೋಡ್‌ನಲ್ಲಿ ನಡೆದ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪೋಸ್ಟ್‌ಗಳನ್ನು ಹಾಕಿದ ಕೆಲ ಪೇಜ್‌ಗಳ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಾಟ್ಸಾಪ್ ಗ್ರೂಪ್‌ಗಳು ಹಾಗೂ ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ದೂರು ದಾಖಲಾಗಿದ್ದು, ಬಿಎನ್‌ಎಸ್ ಸೆಕ್ಷನ್ 78, 126, 103 ಹಾಗೂ ಆರ್ಮ್ಸ್ ಆ್ಯಕ್ಟ್‌ನಡಿ ಪ್ರಕರಣ ದಾಖಲಿಸಲಾಗಿದೆ. ಕೊಲೆ ಆರೋಪಿಯ ಭಾವಚಿತ್ರವನ್ನು ಎಡಿಟ್ ಮಾಡಿ, ಕೇಸರಿ ಶಾಲು ಹಾಕಿ, ಹಣೆಗೆ ತಿಲಕ ಇಟ್ಟು ಆತನನ್ನು ಬಜರಂಗದಳ ಕಾರ್ಯಕರ್ತನೆಂದು ಸುಳ್ಳಾಗಿ ಬಿಂಬಿಸಿ ಪೋಸ್ಟ್ ಮಾಡಲಾಗಿತ್ತು. ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಇಂತಹ ಬರಹಗಳನ್ನು ಹರಿಬಿಡಲಾಗಿದೆ ಎಂದು ಆರೋಪಿಸಲಾಗಿದೆ. ಟ್ರೋಲ್ ಮಾಸ್ಟರ್, ಯುವ ಬೆಳ್ತಂಗಡಿ ಮತ್ತು ಫ್ಯಾಕ್ಟ್ ಅಂಡ್ ಜಸ್ಟೀಸ್ ಸೇರಿದಂತೆ ಕೆಲ ಖಾತೆಗಳಲ್ಲಿ ಇಂತಹ ಪೋಸ್ಟ್‌ಗಳನ್ನು ಹಾಕಲಾಗಿತ್ತು.

ಬಂಟ್ವಾಳ ನಗರ ಠಾಣೆಯಲ್ಲಿ ಈ ಸಂಬಂಧ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಲಾವಣ್ಯ ಹತ್ಯೆ ಪ್ರಕರಣವು ಏಕಪಕ್ಷೀಯ ಪ್ರೇಮ ಪ್ರಕರಣವಾಗಿದ್ದು, ಆಕೆ ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಆರೋಪಿ ಆಕೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇಂತಹ ಘಟನೆಯ ಬಗ್ಗೆ ತಪ್ಪು ಮಾಹಿತಿ ಹರಡಿದ್ದವರ ವಿರುದ್ಧ ಇದೀಗ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us