ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ, ವಿಡಿಯೋ ನೋಡಿ
ಬಂಟ್ವಾಳದ ರಹಿಮಾನ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರು ಶಾದಿ ಮಹಲ್ ಸಭಾಂಗಣದಲ್ಲಿ ಸಭೆ ನಡೆಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚೆ ನಡೆಯಿತು. ಇದೇ ವೇಳೆ ಭಾರೀ ಗದ್ದಲ, ಗಲಾಟೆಯಾಗಿದೆ. ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ಒಂದು ವಾರ ಮುಂದೂಡುವುದಾಗಿ ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ನೆರೆದಿದ್ದ ಮುಸ್ಲಿಮರು ಆಕ್ರೋಶಗೊಂಡಿದ್ದಾರೆ.ರಾಜೀನಾಮೆ ಕೊಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದ ಕಾಂಗ್ರೆಸ್ ಮುಸ್ಲಿಮರು ಸಭೆ ರಣಾಂಗಣವಾಗಿ ಮಾರ್ಪಟ್ಟಿದೆ.
ಮಂಗಳೂರು, (ಮೇ 29): ಬಂಟ್ವಾಳದ ರಹಿಮಾನ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರು ಶಾದಿ ಮಹಲ್ ಸಭಾಂಗಣದಲ್ಲಿ ಸಭೆ ನಡೆಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚೆ ನಡೆಯಿತು. ಇದೇ ವೇಳೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಅವರು ಸಾಮೂಹಿಕ ರಾಜೀನಾಮೆಯಿಂದ ಹಿಂದೆ ಸರಿದಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ಒಂದು ವಾರ ಮುಂದೂಡುವುದಾಗಿ ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ನೆರೆದಿದ್ದ ಮುಸ್ಲಿಮರು ಆಕ್ರೋಶಗೊಂಡಿದ್ದಾರೆ.ರಾಜೀನಾಮೆ ಕೊಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದ ಕಾಂಗ್ರೆಸ್ ಮುಸ್ಲಿಮರು ಸಭೆ ರಣಾಂಗಣವಾಗಿ ಮಾರ್ಪಟ್ಟಿದೆ.
