ಬೈಕ್-ಲಾರಿ ಡಿಕ್ಕಿಯಾಗಿ ಇಬ್ಬರು ಯುವಕರು ಸಾವು, ಭೀಕರ ರಸ್ತೆ ಅಪಘಾತದ ವಿಡಿಯೋ ವೈರಲ್
ಆಂಧ್ರಪ್ರದೇಶದ ಬಾಪಟ್ಲಾ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ವೇಗವಾಗಿ ಬಂದ ಬೈಕ್ ಲಾರಿಗೆ ಡಿಕ್ಕಿ ಹೊಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಾವಳಿಗಳು ವೈರಲ್ ಆಗಿವೆ. ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಯುವಕರನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಲಾರಿ ಚಾಲಕನ ಪತ್ತೆಗೆ ದೂರು ದಾಖಲಿಸಲಾಗಿದೆ.
ಆಂಧ್ರಪ್ರದೇಶ, ನ.6: ಆಂಧ್ರಪ್ರದೇಶದ ಬಾಪಟ್ಲಾ ಎಂಬಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಯುವಕರಿಬ್ಬರು ಪ್ರಾಣ ಕಳೆದುಕೊಂಡಿದ್ದು, ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ. ರಾತ್ರಿ ವೇಳೆ ಬೈಕ್ ಸವಾರ ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಯುವಕರಿಬ್ಬರನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಆದರೆ ಯುವಕರ ಪ್ರಾಣ ಸ್ಥಳದಲ್ಲಿ ಹೋಗಿದೆ. ಇದೀಗ ಅಪಘಾತಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ಲಾರಿ ಚಾಲಕನ ಹುಡುಕಾಟ ನಡೆಯುತ್ತಿದೆ ಎಂದು ಹೇಳಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

