ಒಬಾಮಾ- ದಲೈಲಾಮಾ ಡಿಸೆಂಬರ್​ನಲ್ಲಿ ಹಲ್ಲೆಗೆರೆ ಭೂತಾಯಿ ಟ್ರಸ್ಟ್ ಅಂತಾರಾಷ್ಟ್ರೀಯ ಯೋಗ ಕೇಂದ್ರಕ್ಕೆ ಭೇಟಿ

Edited By: ಸಾಧು ಶ್ರೀನಾಥ್​

Updated on: Sep 01, 2023 | 9:32 AM

Barack Obama And Dalai Lama To Visit Mandya: ಡಿಸೆಂಬರ್​ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹಾಗೂ ಟಿಬೆಟಿಯನ್ ಧರ್ಮಗುರು ದಲೈಲಾಮಾ ಮಂಡ್ಯಕ್ಕೆ ಭೇಟಿ ಕೊಡ್ತಿದ್ದಾರೆ.. ಎಲ್ಲಿಯ ಮಂಡ್ಯ.. ಎಲ್ಲಿಯ ಅಮೆರಿಕ.. ಇಷ್ಟಕ್ಕೂ ಒಬಾಮಾ ಸಕ್ಕರೆನಾಡಿಗೆ ಬರ್ತಿರೋದು ಏಕೆ.. ಇಲ್ಲಿದೆ ಡಿಟೇಲ್ಸ್..

ಡಿಸೆಂಬರ್​ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹಾಗೂ ಟಿಬೆಟಿಯನ್ ಧರ್ಮಗುರು ದಲೈಲಾಮಾ ಮಂಡ್ಯಕ್ಕೆ ಭೇಟಿ ಕೊಡ್ತಿದ್ದಾರೆ.. ಎಲ್ಲಿಯ ಮಂಡ್ಯ.. ಎಲ್ಲಿಯ ಅಮೆರಿಕ.. ಇಷ್ಟಕ್ಕೂ ಒಬಾಮಾ ಸಕ್ಕರೆನಾಡಿಗೆ ಬರ್ತಿರೋದು ಏಕೆ.. ಇಲ್ಲಿದೆ ಡಿಟೇಲ್ಸ್.. ಮಂಡ್ಯದ ಹಲ್ಲೆಗೆರೆಯ (Mandya) ಭೂತಾಯಿ ಟ್ರಸ್ಟ್ ವತಿಯಿಂದ ಹಲ್ಲೆಗೆರೆಯಲ್ಲಿ ನಿರ್ಮಿಸಲಾಗುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರ (International Yoga And Meditation Centre) ಶಂಕುಸ್ಥಾಪನೆಗೆ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ (Barack Obama) ದಂಪತಿ, ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರು ಡಿಸೆಂಬರ್ ತಿಂಗಳಲ್ಲಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ರಸ್ಟ್ ಅಧ್ಯಕ್ಷರಾಗಿರುವ ಅಮೆರಿಕದ ವೈದ್ಯ ಡಾ. ಲಕ್ಷ್ಮಿನರಸಿಂಹ ಮೂರ್ತಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ, ಶಾಸಕರಾದ ರವಿಕುಮಾರ್ ಗಣಿಗ, ಬಾಬು ಬಂಡಿಸಿದ್ದೇಗೌಡ ನೇತೃತ್ವದ ನಿಯೋಗವು ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published on: Sep 01, 2023 09:10 AM
Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More