AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಇಲ್ಲ, ವಿದ್ಯುತ್ ಸಂಪರ್ಕವಿಲ್ಲ! ಮೂಲಭೂತ ಸೌಕರ್ಯವಿಲ್ಲದೆ ಕಾಡಂಚಿನ ಜನರು ಕಂಗಾಲು

ರಸ್ತೆ ಇಲ್ಲ, ವಿದ್ಯುತ್ ಸಂಪರ್ಕವಿಲ್ಲ! ಮೂಲಭೂತ ಸೌಕರ್ಯವಿಲ್ಲದೆ ಕಾಡಂಚಿನ ಜನರು ಕಂಗಾಲು

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Mar 28, 2026 | 9:54 AM

Share

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮ ಮೂಲಭೂತ ಸೌಕರ್ಯಗಳ ಕೊರತೆಯಿಂದ ನರಕಯಾತನೆ ಅನುಭವಿಸುತ್ತಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲಿ ಜೀವನ ಸಾಗುತ್ತಿದೆ. ರಸ್ತೆ ಇಲ್ಲದ ಕಾರಣ ಅನಾರೋಗ್ಯ ಸಂದರ್ಭದಲ್ಲಿ ರೋಗಿಗಳನ್ನು ಡೋಲಿಯಲ್ಲಿ 8 ಕಿಮೀ ದೂರ ಸಾಗಿಸಲು ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆಂಬ್ಯುಲೆನ್ಸ್ ಸೇವೆ ಸಿಗದಿರುವುದು ಗರ್ಭಿಣಿಯರ ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಸಾರಿಗೆ ಬಸ್ ಇಲ್ಲದೆ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಹೋಗಲು ಸಾಧ್ಯವಾಗದೆ 5ನೇ ತರಗತಿವರೆಗೆ ಮಾತ್ರ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಚುನಾವಣೆಯ ಸಮಯದಲ್ಲಿ ಮಾತ್ರ ಜನಪ್ರತಿನಿಧಿಗಳು ಭೇಟಿ ನೀಡುತ್ತಾರೆ ಎಂಬ ಆರೋಪ ಕೇಳಿಬಂದಿದೆ. ಸೂಕ್ತ ಸೌಕರ್ಯ ಒದಗಿಸಲು ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಚಾಮರಾಜನಗರ, ಮಾರ್ಚ್​ 28: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮ ಮೂಲಭೂತ ಸೌಕರ್ಯಗಳ ಕೊರತೆಯಿಂದ ನರಕಯಾತನೆ ಅನುಭವಿಸುತ್ತಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲಿ ಜೀವನ ಸಾಗುತ್ತಿದೆ. ರಸ್ತೆ ಇಲ್ಲದ ಕಾರಣ ಅನಾರೋಗ್ಯ ಸಂದರ್ಭದಲ್ಲಿ ರೋಗಿಗಳನ್ನು ಡೋಲಿಯಲ್ಲಿ 8 ಕಿಮೀ ದೂರ ಸಾಗಿಸಲು ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆಂಬ್ಯುಲೆನ್ಸ್ ಸೇವೆ ಸಿಗದಿರುವುದು ಗರ್ಭಿಣಿಯರ ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಸಾರಿಗೆ ಬಸ್ ಇಲ್ಲದೆ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಹೋಗಲು ಸಾಧ್ಯವಾಗದೆ 5ನೇ ತರಗತಿವರೆಗೆ ಮಾತ್ರ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಚುನಾವಣೆಯ ಸಮಯದಲ್ಲಿ ಮಾತ್ರ ಜನಪ್ರತಿನಿಧಿಗಳು ಭೇಟಿ ನೀಡುತ್ತಾರೆ ಎಂಬ ಆರೋಪ ಕೇಳಿಬಂದಿದೆ. ಸೂಕ್ತ ಸೌಕರ್ಯ ಒದಗಿಸಲು ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More