ವಾಯುಭಾರ ಕುಸಿತ : ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ 4 ದಿನಗಳಲ್ಲಿ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆಯನ್ನ ರಾಜ್ಯ ಹವಾಮಾನ ಇಲಾಖೆ ನೀಡಿದೆ. ಜೊತೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ಬೆಂಗಳೂರು, ಅ.10: ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ 4 ದಿನಗಳಲ್ಲಿ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆಯನ್ನ ರಾಜ್ಯ ಹವಾಮಾನ ಇಲಾಖೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗ, ಉತ್ತರ ಮತ್ತು ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗಲಿದೆ. ಇಂದಿನಿಂದ ಅ.14ರವರೆಗೆ ಉತ್ತರ ಕನ್ನಡ, ಹಾವೇರಿ, ಬೆಳಗಾವಿ, ಗದಗ, ಧಾರವಾಡ, ಹುಬ್ಬಳ್ಳಿ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ,
ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು, ಇಂದು, ನಾಳೆ ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ