ಇವರಿಗೆ ಅಧ್ಯಕ್ಷರು ಯಾರು ಎಂಬುದೇ ಗೊತ್ತಿಲ್ಲ: ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ

Updated on: Dec 19, 2025 | 12:53 PM

ವಿಧಾನಸಭೆ ಅಧಿವೇಶನದಲ್ಲಿ ಶುಕ್ರವಾರ ಸ್ವಾರಸ್ಯಕರ ಚರ್ಚೆ ನಡೆಯಿತು. ಉತ್ತರ ಕರ್ನಾಟಕ ಕುರಿತ ಚರ್ಚೆ ಸಂದರ್ಭದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ, ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿದರು. ಸದನದಲ್ಲಿ ಯತ್ನಾಳ್ ಮಾತಿನ ದಾಟಿಯ ವಿಡಿಯೋ ಇಲ್ಲಿದೆ.

ಬೆಳಗಾವಿ, ಡಿಸೆಂಬರ್ 19: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶುಕ್ರವಾರ ಸ್ವಾರಸ್ಯಕರ ಚರ್ಚೆ ನಡೆಯಿತು. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತಿರುವಾಗ, ಪ್ರತಿಪಕ್ಷ ಬಿಜೆಪಿ ಅಧಿಕಾರ ಹಂಚಿಕೆ ಕಿತ್ತಾಟದ ಬಗ್ಗೆ ಪ್ರಸ್ತಾಪಿಸಿತು. ಈ ವೇಳೆ ಮಧ್ಯಪ್ರವೇಶಿಸಿದ ವಿಜಯಪುರ ನಗರ ಶಾಸಕ (ಬಿಜೆಪಿ ಉಚ್ಛಾಟಿತ ಶಾಸಕ) ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಮಾತನಾಡಿ ಬಿಜೆಪಿಗೆ ಟಾಂಗ್ ನೀಡಿದರು. ಉತ್ತರ ಕರ್ನಾಟಕದ ಬಗ್ಗೆ ಮಾತನಾಡುವುದನ್ನು ಬಿಟ್ಟು ಹೇಳಿದ್ದನ್ನೇ ಹೇಳಿಕೊಂಡು ಸಮಯ ಹಾಳು ಮಾಡುತ್ತಾರೆ. ಪಾಪ ಅವರು (ಸಿದ್ದರಾಮಯ್ಯ) ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೋ ಇಲ್ಲವೋ ಅದು ಅವರಿಗೆ ಬಿಟ್ಟ ವಿಚಾರ. ಬಿಜೆಪಿ ಅವರಿಗೆ ಅಧ್ಯಕ್ಷ ಯಾರು ಎಂಬುದೇ ಸ್ಪಷ್ಟತೆ ಇಲ್ಲ ಎಂದು ಯತ್ನಾಳ್ ವ್ಯಂಗ್ಯವಾಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ