ಶಿವಮೊಗ್ಗ ಈದ್ ಗಲಾಟೆ ಬಗ್ಗೆ ಸರ್ಕಾರಕ್ಕೆ ಖಡಕ್ ವಾರ್ನಿಂಗ್ ಕೊಟ್ಟ ಬಸನಗೌಡ ಪಾಟೀಲ್ ಯತ್ನಾಳ್; ಇಲ್ಲಿದೆ ವಿಡಿಯೋ
ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಹುಬ್ಬಳ್ಳಿ ಗಲಾಟೆ ಕೇಸ್ ಹಿಂಪಡೆಯಲು ಸರ್ಕಾರ ಚಿಂತನೆ ನಡೆಸಿದೆ. ಇನ್ಮೇಲೆ ರಾಜ್ಯದಲ್ಲಿ ಹಿಂದೂಗಳು ಬದುಕಬೇಕಾ, ಬೇಡ್ವಾ ಎನ್ನುವ ವಾತಾವರಣ ಸೃಷ್ಟಿಸಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.
ಯಾದಗಿರಿ, ಅ.03: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಯಾದಗಿರಿ(Yadagiri) ಜಿಲ್ಲೆಯ ಶಹಾಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagouda patil yatnal) ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಎಸ್ಪಿ ಸೇರಿ ಪೊಲೀಸರ ಮೇಲೆ ಕಲ್ಲುತೂರಾಟ ಮಾಡುತ್ತಾರೆಂದರೆ ಎಷ್ಟು ಧೈರ್ಯವಿರಬೇಕು. ಇದೆ ರೀತಿ ನಿಮ್ಮ ಆಡಳಿತ ನಡೆದರೆ, ಹಿಂದೂಗಳೆ ತಮ್ಮ ರಕ್ಷಣೆಗೆ ಹೊರ ಬರಬೇಕಾಗುತ್ತದೆ ಎನ್ನುವ ಮೂಲಕ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇದರ ಜೊತೆಗೆ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಹುಬ್ಬಳ್ಳಿ ಗಲಾಟೆ ಕೇಸ್ ಹಿಂಪಡೆಯಲು ಸರ್ಕಾರ ಚಿಂತನೆ ನಡೆಸಿದೆ. ಇನ್ಮೇಲೆ ರಾಜ್ಯದಲ್ಲಿ ಹಿಂದೂಗಳು ಬದುಕಬೇಕಾ, ಬೇಡ್ವಾ ಎನ್ನುವ ವಾತಾವರಣ ಸೃಷ್ಟಿಸಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
