ಶಾಸಕ ಯತ್ನಾಳ್​​ ಪುತ್ರನ ಆರತಕ್ಷತೆಯಲ್ಲಿ ಜನವೋ ಜನ!: ವಿವಿಧ ಗಣ್ಯರು, ಮಠಾಧೀಶರು ಭಾಗಿ

Edited By:

Updated on: Mar 15, 2026 | 4:14 PM

ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ರ ರಾಮನಗೌಡ ಮತ್ತು ಅಬೋಲಿ ಅವರ ಆರತಕ್ಷತೆ ಅದ್ದೂರಿಯಾಗಿ ನೆರವೇರಿತು. ಈ ಸಮಾರಂಭಕ್ಕೆ ವಿವಿಧ ಮಠಾಧೀಶರು, ರಾಜಕಾರಣಿಗಳು ಹಾಗೂ ಗಣ್ಯರು ಆಗಮಿಸಿ ನವದಂಪತಿಗಳನ್ನು ಹಾರೈಸಿದರು. ಕಲಾವಿದರ ಸ್ವಾಗತದೊಂದಿಗೆ ವಧು-ವರರು ಆಗಮಿಸಿ, ಮಂತ್ರ-ಘೋಷಗಳ ಮಧ್ಯೆ ಹಾರ ಬದಲಾಯಿಸಿಕೊಂಡರು.

ವಿಜಯಪುರ, ಮಾರ್ಚ್​​ 15: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ರ ರಾಮನಗೌಡ ಅವರ ಅದ್ದೂರಿ ವಿವಾಹ ಆರತಕ್ಷತೆ ಕಾರ್ಯಕ್ರಮವು ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಆವರಣದಲ್ಲಿ ವಿಜೃಂಭಣೆಯಿಂದ ಜರುಗಿತು. ರಾಮನಗೌಡ ಹಾಗೂ ಅಬೋಲಿ ಅವರ ವಿವಾಹೋತ್ಸವದ ಆರತಕ್ಷತೆಯಲ್ಲಿ ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದರು. ನಾಡಿನ ವಿವಿಧ ಮಠಾಧೀಶರು, ರಾಜಕಾರಣಿಗಳು ಹಾಗೂ ಅನೇಕ ಗಣ್ಯ ವ್ಯಕ್ತಿಗಳು ಆಗಮಿಸಿ ನೂತನ ದಂಪತಿಗಳನ್ನು ಶುಭ ಹಾರೈಸಿದ್ದಾರೆ. ಮಂತ್ರ-ಘೋಷಗಳ ಮಧ್ಯೆ ವಧು-ವರರು ಪರಸ್ಪರ ಹಾರ ಬದಲಾಯಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಶಾಸಕ ಯತ್ನಾಳ್ ಅವರ ನೃತ್ಯ ವಿಶೇಷವಾಗಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More