ಜಗತ್ತಿನ ಅತಿದೊಡ್ಡ ಪಕ್ಷ ಬಿಜೆಪಿಗೆ ಮೈತ್ರಿಯ ಅನಿವಾರ್ಯತೆ ಯಾಕೆ ಅಂತ ಕೇಳಿದಾಗ ಬಸನಗೌಡ ಯತ್ನಾಳ್ ಗೊಂದಲಕ್ಕೆ ಬಿದ್ದರು!
2018 ರ ವಿಧಾನ ಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದ್ದ ಬಿಜೆಪಿಯ ನಾಯಕನೊಬ್ಬ ಮುಖ್ಯಮಂತ್ರಿಯಾಗಬೇಕಿತ್ತು, ಅದರೆ ಕಾಂಗ್ರೆಸ್, ಜೆಡಿಎಸ್ ಜೊತೆ ಸೇರಿ ಕುಮಾರಸ್ವಾಮಿಯವರನ್ನು ಸಿಎಂ ಮಾಡಿತು. ಆಗ ನಾಯಿ ಹಸಿದಿರಲಿಲ್ಲ ಮತ್ತು ಅನ್ನ ಹಳಸಿರಲಿಲ್ಲವೇ? ಅಂತ ಯತ್ನಾಳ್ ಕೇಳಿದರು.
ಕೊಪ್ಪಳ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಇಂದು ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತಾಡುವಾಗ ಎಲ್ಲ ವಿಷಯಗಳನ್ನು ಸ್ಪಷ್ಟವಾಗಿ ಮಾತಾಡಿದರೂ ಬಿಜೆಪಿ-ಜೆಡಿಎಸ್ ಮೈತ್ರಿಯ (BJP-JDS alliance) ಬಗ್ಗೆ ಕೇಳಿದ್ದ ಪ್ರಶ್ನೆಗೆ ಮಾತ್ರ ಹಾರಿಕೆಯ ಉತ್ತರಗಳನ್ನು ನೀಡಿದರು. ಅದು ತಮ್ಮ ವ್ಯಾಪ್ತಿಯಲ್ಲಿರದ ಸಂಗತಿ, ಅದೇನಿದ್ದರೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಅವರು ಹೇಳಿದರು. ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಜೆಡಿಎಸ್-ಬಿಜೆಪಿ ಮೈತ್ರಿಯ ಬಗ್ಗೆ ಅನ್ನ ಹಳಸಿತ್ತು ನಾಯಿ ಹಸಿದಿತ್ತು ಅಂತ ಎಕ್ಸ್ ನಲ್ಲಿ (ಟ್ವಿಟ್ಟರ್) ಮಾಡಿರುವ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಯತ್ನಾಳ್ 2018 ರ ವಿಧಾನ ಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದ್ದ ಬಿಜೆಪಿಯ ನಾಯಕನೊಬ್ಬ ಮುಖ್ಯಮಂತ್ರಿಯಾಗಬೇಕಿತ್ತು, ಅದರೆ ಕಾಂಗ್ರೆಸ್, ಜೆಡಿಎಸ್ ಜೊತೆ ಸೇರಿ ಕುಮಾರಸ್ವಾಮಿಯವರನ್ನು ಸಿಎಂ ಮಾಡಿತು. ಆಗ ನಾಯಿ ಹಸಿದಿರಲಿಲ್ಲ ಮತ್ತು ಅನ್ನ ಹಳಸಿರಲಿಲ್ಲವೇ? ಅಂತ ಕೇಳಿದರು. ಜಗತ್ತಿನ ಅತಿದೊಡ್ಡ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಗೆ ಜೆಡಿಎಸ್ ಜೊತೆ ಮೈತ್ರಿ ಬೆಳೆಸುವ ಅನಿವಾರ್ಯತೆ ಯಾಕೆ ಅಂತ ಕೇಳಿದಾಗ ಗೊಂದಲಕ್ಕೆ ಬೀಳುವ ಯತ್ನಾಳ್, ಉತ್ತರಿಸಲು ತಡಬಡಾಯಿಸಿ ಹಾರಿಕೆಯ ಉತ್ತರ ನೀಡುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ