ಬೆಂಗಳೂರಲ್ಲೇ ಉಳಿದಿರುವ ಬಸನಗೌಡ ಯತ್ನಾಳ್​ರಿಂದ ಶನಿಮಹಾತ್ಮ ದೇವಸ್ಥಾನದಲ್ಲಿ ಪೂಜೆ

ಅರುಣ್​ ಕುಮಾರ್​ ಬೆಳ್ಳಿ

Updated on: Mar 29, 2025 | 11:18 AM

ಪಕ್ಷದಿಂದ ಉಚ್ಚಾಟನೆಗೊಂಡ ಬಳಿಕ ಬಸನಗೌಡ ಪಾಟೀಲ್ ಯತ್ನಾಳ್ ಇನ್ನೂ ವಿಜಯಪುರ ಹೋಗಿಲ್ಲ. ದೆಹಲಿಯಿಂದ ಅವರು ಹೈದರಾಬಾದ್ ಬಂದು ಅಲ್ಲಿಂದ ಚಿಂಚೋಳಿಗೆ ಆಗಮಿಸಿ ಅಲ್ಲಿ ಒಂದು ತಂಗಿ ಬೆಂಗಳೂರಿಗೆ ಬಂದಿದ್ದಾರೆ. ಇಂದು ಅವರು ವಿಜಯಪುರಕ್ಕೆ ಮರಳುವ ನಿರೀಕ್ಷೆ ಇದೆ. ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಅವರು ಒಂದೆರಡು ದಿನಗಳಲ್ಲಿ ಹೇಳಬಹುದು.

ಬೆಂಗಳೂರು, ಮಾರ್ಚ್ 29: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇನ್ನೂ ಬೆಂಗಳೂರಲ್ಲಿದ್ದಾರೆ. ಇಂದು ಅಮವಾಸ್ಯೆಯ ಪ್ರಯುಕ್ತ ಅವರು ನಗರದ ಶನಿಮಹಾತ್ಮ ದೇವಸ್ಥಾನದಲ್ಲಿ (Shani Mahatma temple) ನಡೆದ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದರು. ಅವರೊಬ್ಬ ದೈವಭಕ್ತ ಅಂತ ಕನ್ನಡಿಗರಿಗೆಲ್ಲ ಗೊತ್ತು. ಬಿಜೆಪಿಯಿಂದ ಉಚ್ಚಾಟನೆಗೊಂಡ ಬಳಿಕ ಅವರು ಮಾಧ್ಯಮಗಳ ಕಣ್ಣು ತಪ್ಪಿಸಿ ಓಡಾಡುತ್ತಿರೋದು ಸತ್ಯ,. ನಿನ್ನೆ ಅವರು ಮಾಜಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಮನೆಗೆ ಭೇಟಿ ನೀಡಿದ್ದರು.

ಇದನ್ನೂ ಓದಿ:   ಯತ್ನಾಳ್ ಬಗ್ಗೆ ವರಿಷ್ಠರಿಗೆ ಆಗಿರಬಹುದಾದ ತಪ್ಪು ಗ್ರಹಿಕೆ ಚರ್ಚಿಸಲು ಸಿದ್ಧರಿದ್ದೇವೆ: ಕುಮಾರ್ ಬಂಗಾರಪ್ಪ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.