ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್: ಯತ್ನಾಳ್ ಕುಣಿತ ಹೇಗಿದೆ ನೋಡಿ
ಬ್ರಹ್ಮಾವರದ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ಹಿನ್ನೆಲೆಯಲ್ಲಿ ನಡೆದ ಹುಲಿವೇಷದ ಊದು ಪೂಜೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾಗಿಯಾಗಿದ್ದಾರೆ. ಹುಲಿ ವೇಷಧಾರಿಗಳ ಕುಣಿತಕ್ಕೆ ಮನಸೋತ ಅವರು, ತಾಸೆಯ ಪೆಟ್ಟಿಗೆಗೆ ಭರ್ಜರಿ ಸ್ಟೆಪ್ ಹಾಕಿ ಗಮನ ಸೆಳೆದಿದ್ದಾರೆ. ಯತ್ನಾಳ್ ಹುಲಿವೇಷ ಕುಣಿತದ ವಿಡಿಯೋ ಈಗ ವೈರಲ್ ಆಗುತ್ತಿದೆ.
ಉಡುಪಿ, ಸೆಪ್ಟೆಂಬರ್ 18: ಹುಲಿ ಕುಣಿತಕ್ಕೆ ಮನಸೋತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ಹಿನ್ನೆಲೆಯಲ್ಲಿ ವಾರಂಬಳ್ಳಿ ಫ್ರೆಂಡ್ಸ್ ವತಿಯಿಂದ ಆಯೋಜಿಸಿದ್ದ ಹುಲಿವೇಷದ ಊದು ಪೂಜೆಯಲ್ಲಿ ಶಾಸಕ ಯತ್ನಾಳ್ ಭಾಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಹುಲಿ ವೇಷಧಾರಿಗಳ ವಿಶೇಷ ಕುಣಿತವನ್ನು ಕಂಡು ಮೆಚ್ಚಿದ ಯತ್ನಾಳ್, ತಾಸೆಯ ಪೆಟ್ಟಿಗೆಗೆ ಹೆಜ್ಜೆ ಹಾಕಿದ್ದಾರೆ. ಹುಲಿ ವೇಷಧಾರಿಗಳೊಂದಿಗೆ ಸೇರಿಕೊಂಡು ಕುಣಿದ ಯತ್ನಾಳ್ ಅವರ ವಿಡಿಯೋ ಇದೀಗ ಗಮನ ಸೆಳೆಯುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ ಪ್ರಕರಣ ಬಯಲಾಗಿದ್ದೇ ರೋಚಕ
ಕೆಪಿಎಸ್ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!

