ಕುಟುಂಬ ರಾಜಕಾರಣದಿಂದ ಬಿಜೆಪಿ ಹೊರಬರುವ ವರೆಗೂ ಮತ್ತೆ ಪಕ್ಷಕ್ಕೆ ಬರಲ್ಲ: ಯತ್ನಾಳ್ ಖಡಕ್ ನುಡಿ

Edited By:

Updated on: Apr 07, 2025 | 11:51 AM

ಕುಟುಂಬ ರಾಜಕಾರಣದ ವಶದಿಂದ ಬಿಜೆಪಿ ಹೊರ ಬರುವ ವರೆಗೂ ಪಕ್ಷಕ್ಕೆ ಮತ್ತೆ ಸೇರುವುದಿಲ್ಲ ಎಂದು ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಅಲ್ಲದೆ, ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಮಾತಿನ ವಿಡಿಯೋ ಇಲ್ಲಿದೆ.

ಬೆಳಗಾವಿ, ಏಪ್ರಿಲ್ 7: ಒಂದೆಡೆ, ಪ್ರಧಾನಿ ನರೇಂದ್ರ ಮೋದಿ ಕುಟುಂಬ ರಾಜಕಾರಣದ ವಿರುದ್ಧ ಮಾತನಾಡುತ್ತಾರೆ. ಮತ್ತೊಂದೆಡೆ, ಕರ್ನಾಟಕದಲ್ಲಿ ಬಿಎಸ್​ ಯಡಿಯೂರಪ್ಪ ಕುಟುಂಬದ ರಾಜಕಾರಣ ನಡೆಯುತ್ತಿದೆ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಮತ್ತೆ ಬಿಜೆಪಿಗೆ ಯಾಕೆ ಬರಬೇಕು? ವಿಜಯೇಂದ್ರನ ಗೆಲ್ಲಿಸಲು ಬರಬೇಕಾ? ಕುಟುಂಬ ರಾಜಕಾರಣ ತೊಲಗುವ ವರೆಗೂ ಬಿಜೆಪಿಗೆ ಬರಲ್ಲ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 07, 2025 11:45 AM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More