ಗುದ್ದಲಿ ಪೂಜೆಗೆ ಪ್ರಾಮಾಣಿಕರು ಸಿಗಲಿಲ್ವಾ? ಯಡಿಯೂರಪ್ಪೋತ್ಸವ ಬಗ್ಗೆ ಯತ್ನಾಳ್ ವ್ಯಂಗ್ಯ

Edited By:

Updated on: Apr 27, 2026 | 10:45 PM

ಯತ್ನಾಳ್ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಯಡಿಯೂರಪ್ಪನವರ ಕಾರ್ಯಕ್ರಮವನ್ನು ಕೇಂದ್ರ ಬಿಜೆಪಿಗೆ ಬ್ಲಾಕ್‌ಮೇಲ್ ಎಂದು ಬಣ್ಣಿಸಿದ್ದಾರೆ. ಮಗನ ಭವಿಷ್ಯಕ್ಕಾಗಿ ನಡೆಸುವ ಈ ಉತ್ಸವಕ್ಕೆ ಪ್ರಾಮಾಣಿಕ ಕಾರ್ಯಕರ್ತರು ಭಾಗವಹಿಸಬಾರದು ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ, ರಾಜ್ಯದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮತ್ತು ನಿರುದ್ಯೋಗವನ್ನು ಪ್ರತಿಬಿಂಬಿಸಲು ಹಿಂದೂ ಸಮಾವೇಶ ಆಯೋಜಿಸುವುದಾಗಿ ತಿಳಿಸಿದ್ದಾರೆ.

ವಿಜಯಪುರ, ಏಪ್ರಿಲ್​ 27: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನವನ್ನು ಸ್ಮರಿಸುವ ನಿಟ್ಟಿನಲ್ಲಿ ಮೇ 9 ರಂದು ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದ್ದು, ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಮಾರಂಭಕ್ಕೆ ಗುದ್ದಲಿ ಪೂಜೆ ಮಾಡಿದ್ದಾರೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್, ​ಅಪ್ಪನ ಸಮಾರಂಭಕ್ಕೆ ಮಗ ಗುದ್ದಲಿ ಪೂಜೆ ಮಾಡಿದ್ದಾನೆ. ಬೇರೆ ಪ್ರಾಮಾಣಿಕರು ಸಿಗಲಿಲ್ಲವಾ ಇವರಿಗೆ ಎಂದು ವಾಗ್ದಾಳಿ ಮಾಡಿದ್ದಾರೆ. ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಸದಿದ್ದರೆ, ಸಿಎಂ ಅಭ್ಯರ್ಥಿ ಮಾಡದಿದ್ದರೆ ಲಿಂಗಾಯತರು ಬಿಜೆಪಿ ಬಿಡ್ತಾರೆಂಬ ಸಂದೇಶ ರವಾನಿಸಲು ಯಡಿಯೂರಪ್ಪೋತ್ಸವ ಮಾಡುತ್ತಿದ್ದಾರೆ ಎಂದು ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More