ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಪ್ರಕಟಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ನೆಲಕಚ್ಚುತ್ತದೆ: ಬಸನಗೌಡ ಯತ್ನಾಳ್

Edited By:

Updated on: Dec 22, 2022 | 12:12 PM

ಸರ್ಕಾರ ಪಂಚಮಸಾಲಿ ಸಮುದಾಯಯಕ್ಕೆ 2ಎ ಮೀಸಲಾತಿ ಘೋಷಿಸದಿದ್ದರೆ ಮುಂದಿನ ನಡೆಯ ಬಗ್ಗೆ ಸಾಯಂಕಾಲ ತಿಳಿಸಲಾಗುವುದು ಎಂದು ಯತ್ನಾಳ್ ಹೇಳಿದರು.

ಬೆಳಗಾವಿ: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಪರೋಕ್ಷ ದಾಳಿ ನಡೆಸುವುದರ ಜೊತೆಗೆ ಪಂಚಮಸಾಲಿ ಸಮುದಾಯಕ್ಕೆ (Panchamasali Lingayats) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾವು ನೀಡಿದ ಆಶ್ವಾಸನೆಯಂತೆ 2ಎ ಮಿಸಲಾತಿ ಪ್ರಕಟಿಸದಿದ್ದರೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೆಲಕಚ್ಚುವುದರ ಜೊತೆಗೆ ಪಕ್ಷದ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದು ಎಚ್ಚರಿಸಿದ್ದಾರೆ. ಬೆಳಗಾವಿಯಲ್ಲಿ ಟಿವಿ9 ಕನ್ನಡ ವಾಹಿನಿಯ ವರದಿಗಾರನೊಂದಿಗೆ ಮಾತಾಡಿದ ಯತ್ನಾಳ್, ಸರ್ಕಾರ ಪಂಚಮಸಾಲಿ ಸಮುದಾಯಯಕ್ಕೆ 2ಎ ಮೀಸಲಾತಿ ಘೋಷಿಸದಿದ್ದರೆ ಮುಂದಿನ ನಡೆಯ ಬಗ್ಗೆ ಸಾಯಂಕಾಲ ತಿಳಿಸಲಾಗುವುದು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Dec 22, 2022 11:02 AM