ಯತ್ನಾಳ್ ತಮ್ಮ ಭಾಷಣದಲ್ಲಿ ವಕ್ಫ್ ಎಂದಾಗ ಸಾರ್ವಜನಿಕರು ರಾಜಕೀಯ ಬೇಡ ಎಂದರು!

ಅರುಣ್​ ಕುಮಾರ್​ ಬೆಳ್ಳಿ

Updated on: Nov 11, 2024 | 4:16 PM

ಮೊನ್ನೆಯಷ್ಟೇ ಬಸನಗೌಡ ಯತ್ನಾಳ್ ವಕ್ಫ್ ಭೂವಿವಾದ ಸಂಬಂಧಿಸಿದಂತೆ ವಿಜಯಪುರದಲ್ಲಿ ರೈತರ ಪರವಾಗಿ ಒಂದು ಯಶಸ್ವೀ ಹೋರಾಟ ನಡೆಸಿದರು. ಅದರ ಫಲವಾಗಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ರಚಿಸಿರುವ ಜಗದಂಬಿಕಾ ಪಾಲ್ ನೇತೃತ್ವದ ಜಂಟಿ ಸಂಸದೀಯ ಸಮಿತಿಯು ವಿಜಯಪುರಕ್ಕೆ ಆಗಮಿಸಿ ರೈತರ ಸಮಸ್ಯೆಗಳನ್ನು ಆಲಿಸಿತು.

ಬಾಗಲಕೋಟೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಂದ್ಯಾವತ್ತೂ ಇಂಥ ಸ್ಥಿತಿಯನ್ನು ಎದುರಿಸಿಲ್ಲ ಅನಿಸುತ್ತೆ. ಜಿಲ್ಲೆಯ ತೇರದಾಳದಲ್ಲಿ ಅಲ್ಲಮಪ್ರಭು ದೇವಸ್ಥಾನದ ಲೋಕಾರ್ಪಖೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡುವಾಗ ಅವರು ತಮ್ಮ ಮಾತನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು. ಯತ್ನಾಳ್ ತಮ್ಮ ಮಾತಿನಲ್ಲಿ ವಕ್ಫ್ ವಿಚಾರವನ್ನು ಪ್ರಸ್ತಾಪಿಸಿದಾಗ ಉದ್ರಿಕ್ತರಾಗುವ ಸಾರ್ವಜನಿಕರು ರಾಜಕೀಯದ ಮಾತು ಬೇಡ ಎಂದು ಕಿರುಚಲಾರಂಭಿಸುತ್ತಾರೆ. ಇದು ರಾಜಕೀಯದ ಮಾತಾ ಎನ್ನುತ್ತಾ ಯತ್ನಾಳ್ ಭಾಷಣವನ್ನು ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿಯುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಯ್ತು ಎಫ್​ಐಆರ್; ಕಾರಣ?

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.