ಮಾತಾಡುವ ಸ್ವಾತಂತ್ರ್ಯ ಯತ್ನಾಳ್ಗಿದೆ, ಅವರ ಟೀಕೆಗಳಿಗೆ ನಾನು ತಲೆಕೆಡಿಸಿಕೊಳ್ಳಲ್ಲ: ಬಿವೈ ವಿಜಯೇಂದ್ರ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಗಾಳಿಯೊಂದನ್ನು ಬಿಟ್ಟು ಉಳಿದೆಲ್ಲದರ ಮೇಲೆ ತೆರಿಗೆ ಹೇರಿದೆ, ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈಯಿಂದ ಕಿತ್ತುಕೊಳ್ಳುತ್ತಿದೆ, ರಾಜ್ಯದ ಜನ ದುರಾಡಳಿತದಿಂದ ಬೇಸತ್ತಿದ್ದಾರೆ, ಸರ್ಕಾರದ ವಿರುದ್ಧ ಜನಜಾಗೃತಿ ಅಭಿಯಾನವನ್ನು ಶುರುಮಾಡಿದ್ದೇವೆ, ಪಕ್ಷದ ಹೋರಾಟ ನಿಲ್ಲುವುದಿಲ್ಲ ಎಂದು ವಿಜಯೇಂದ್ರ ಹೇಳಿದರು.
ತುಮಕೂರು, ಏಪ್ರಿಲ್ 1: ಸಿದ್ದಗಂಗಾ ಮಠದ ಶಿವಕುಮಾರ್ ಶ್ರೀಗಳ 118ನೇ ಜನ್ಮ ವಾರ್ಷಿಕೋತ್ಸವದ (118th birth anniversary of Sri Shivakumar Swamiji) ಅಂಗವಾಗಿ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಈಗ ಬಸನಗೌಡ ಪಾಟೀಲ್ ಯತ್ನಾಳ್ ಫ್ರೀಯಾಗಿದ್ದಾರೆ, ಅವರ ಟೀಕೆಗಳಿಗೆ ತಲೆಕೆಡಿಸಿಕೊಳ್ಳಲ್ಲ, ದೇಶದಲ್ಲಿ ಮಾತಾಡುವ ಸ್ವಾತಂತ್ರ್ಯ ಎಲ್ಲರಿಗೂ ಇದೆ , ಪಕ್ಷದ ರಾಜ್ಯಾಧ್ಯಕ್ಷನಾಗಿ ಕೆಲ ಜವಾಬ್ದಾರಿಗಳು ತನ್ನ ಮೇಲಿವೆ, ಈ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ತಮ್ಮ ಪಕ್ಷ ಹೋರಾಡುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: ಯತ್ನಾಳ್ ಉಚ್ಛಾಟನೆ ಬೆನ್ನಲ್ಲೇ ಮಹತ್ವದ ಸಂದೇಶ ರವಾನಿಸಿದ ವಿಜಯೇಂದ್ರ..!
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ