ಉಚಿತ ಅಕ್ಕಿ ಅನ್ನ ತಿಂದು, ಬಸ್ಸಲ್ಲಿ ಓಡಾಡ್ಕೊಂಡಿದ್ರೆ ಸಾಕಾ, ಉದ್ಯೋಗ ಬೇಡವಾ: ಸಿದ್ದರಾಮಯ್ಯ ಸರ್ಕಾರಕ್ಕೆ ಯತ್ನಾಳ್ ಪ್ರಶ್ನೆ

Updated on: Sep 26, 2025 | 12:05 PM

ದಾವಣಗೆರೆಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಳ್ ಯತ್ನಾಳ್ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೇಲಿಂದ ಮೇಲೆ ವಾಗ್ದಾಳಿ ನಡೆಸಿದ್ದು, ಪೊಲೀಸ್ ನೇಮಕಾತಿ ವಿಚಾರ ಪ್ರಸ್ತಾಪಿಸಿ ಕಿಡಿಕಾರಿದ್ದಾರೆ. ಪೊಲೀಸ್ ನೇಮಕಾತಿಯಲ್ಲಿ ವಯಸ್ಸಿನ ಮಿತಿಯ ಕುರಿತು ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿದ ಅವರು, ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆಯೂ ಮಾತನಾಡಿದರು.

ದಾವಣಗೆರೆ, ಸೆಪ್ಟೆಂಬರ್ 26: ಪೊಲೀಸ್ ನೇಮಕಾತಿ ಮಾಡುತ್ತಿಲ್ಲ. ಧಾರವಾಡದಲ್ಲಿ ನೂರಾರು ಯುವಕರು ರೊಚ್ಚಿಗೆದ್ದಿದ್ದಾರೆ. ಹೀಗೇ ಆದರೆ, ಮಂತ್ರಿಗಳ ಮನೆಗೂ ನೇಪಾಳದಂತೆ ಯುವಕರು ದಾಳಿ ಮಾಡುವ ದಿನ ದೂರವಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು, ಉಚಿತ ಅಕ್ಕಿಯ ಅನ್ನ ಉಂಡುಕೊಂಡು ಬಸ್ಸಲ್ಲಿ ಓಡಾಡಿಕೊಂಡಿದ್ದರೆ ಸಾಕೇ? ಯುವಕರಿಗೆ ಉದ್ಯೋಗ ಬೇಡವೇ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಪ್ರಶ್ನಿಸಿದರು. ಪೊಲೀಸ್ ನೇಮಕಾತಿಯನ್ನು ವಯಸ್ಸಿನ ಮಿತಿ ರಿಯಾಯಿತಿ ನೀಡುವಂತೆ ಆಗ್ರಹಿಸಿದರು.

‘ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ನಡೆಯುತ್ತಿದೆ. ಇದೇ ಕಾರಣದಿಂದ ನಾನು ಹೋದಲ್ಲೆಲ್ಲ ಜನ ಸೇರುತ್ತಿದ್ದಾರೆ. ನಾನು ಒಂಟಿ ಸಲಗ. ಆದರೂ ಜನ ಯಾಕೆ ಬರುತ್ತಾರೆ ಎಂದರೆ ಅರ್ಥ ಮಾಡಿಕೊಳ್ಳಿ’ ಎಂದು ಯತ್ನಾಳ್ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More