ಬಸನಗೌಡ ಯತ್ನಾಳ್ ಇಚ್ಛಿಸಿದರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳೋದು ಕಷ್ಟ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಕಾಂಗ್ರೆಸ್ ಪಕ್ಷ ಸೇರುತ್ತೇನೆಂದು ಇದುವರೆಗೆ ಅರ್ಜಿ ಹಾಕಿಲ್ಲ, ಒಂದು ಪಕ್ಷ ಅರ್ಜಿ ಸಲ್ಲಿಸಿದರೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿಸಿಕೊಳ್ಳುವುದೋ ಇಲ್ಲವೋ ಅಂತ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಪಾಟೀಲ್ ಹೇಳಿದರು. ಯತ್ನಾಳ್ ಮತ್ತು ಪಾಟೀಲ್ ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ.
ವಿಜಯಪುರ, ಮಾರ್ಚ್ 31: ಬಿಜೆಪಿ ಉಚ್ಚಾಟಿತರಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುರಿತು ಕೇಳಿದ ಪ್ರಶ್ನೆಗೆ ಸಚಿವ ಎಂಬಿ ಪಾಟೀಲ್ (MB Patil) ಸಿಡುಕಿದಂತೆ ಮಾತಾಡಿದರು. ಅವರಿಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ, ಅವರು ಕಾಂಗ್ರೆಸ್ ಪಕ್ಷ ಸೇರುತ್ತೇನೆಂದರೂ ಸೇರಿಸಿಕೊಳ್ಳೋದು ಬಹಳ ಕಷ್ಟ, ಯಾಕೆಂದರೆ ಅವರು ಒಂದು ನಿರ್ದಿಷ್ಟ ಸಮುದಾಯದ ಬಗ್ಗೆ ಬಹಳ ಕೆಟ್ಟದ್ದಾಗಿ, ಅಸಹ್ಯ ಮತ್ತು ಕೀಳಾಗಿ ಮಾತಾಡಿದ್ದಾರೆ, ಹಾಗಾಗಿ ಅವರಿಗೆ ತಮ್ಮ ಪಕ್ಷದಲ್ಲಿ ಸ್ಥಾನ ಸಿಗಲಾರದು ಎಂದು ಪಾಟೀಲ್ ಹೇಳಿದರು.
ಇದನ್ನೂ ಓದಿ: ಬಸನಗೌಡ ಯತ್ನಾಳ್ರನ್ನು ಉಚ್ಚಾಟಿಸಿ ಬಿಜೆಪಿ ಲಿಂಗಾಯತ ಸಮುದಾಯಕ್ಕೆ ಕೆಟ್ಟ ಸಂದೇಶ ನೀಡಿದೆ: ಶಿವರಾಜ ತಂಗಡಿಗಿ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Latest Videos