ಬಸನಗೌಡ ಯತ್ನಾಳ್ ಇಚ್ಛಿಸಿದರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳೋದು ಕಷ್ಟ: ಎಂಬಿ ಪಾಟೀಲ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 31, 2025 | 11:56 AM

ಬಸನಗೌಡ ಯತ್ನಾಳ್ ಕಾಂಗ್ರೆಸ್ ಪಕ್ಷ ಸೇರುತ್ತೇನೆಂದು ಇದುವರೆಗೆ ಅರ್ಜಿ ಹಾಕಿಲ್ಲ, ಒಂದು ಪಕ್ಷ ಅರ್ಜಿ ಸಲ್ಲಿಸಿದರೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿಸಿಕೊಳ್ಳುವುದೋ ಇಲ್ಲವೋ ಅಂತ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಪಾಟೀಲ್ ಹೇಳಿದರು. ಯತ್ನಾಳ್ ಮತ್ತು ಪಾಟೀಲ್ ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ.

ವಿಜಯಪುರ, ಮಾರ್ಚ್ 31: ಬಿಜೆಪಿ ಉಚ್ಚಾಟಿತರಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುರಿತು ಕೇಳಿದ ಪ್ರಶ್ನೆಗೆ ಸಚಿವ ಎಂಬಿ ಪಾಟೀಲ್ (MB Patil) ಸಿಡುಕಿದಂತೆ ಮಾತಾಡಿದರು. ಅವರಿಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ, ಅವರು ಕಾಂಗ್ರೆಸ್ ಪಕ್ಷ ಸೇರುತ್ತೇನೆಂದರೂ ಸೇರಿಸಿಕೊಳ್ಳೋದು ಬಹಳ ಕಷ್ಟ, ಯಾಕೆಂದರೆ ಅವರು ಒಂದು ನಿರ್ದಿಷ್ಟ ಸಮುದಾಯದ ಬಗ್ಗೆ ಬಹಳ ಕೆಟ್ಟದ್ದಾಗಿ, ಅಸಹ್ಯ ಮತ್ತು ಕೀಳಾಗಿ ಮಾತಾಡಿದ್ದಾರೆ, ಹಾಗಾಗಿ ಅವರಿಗೆ ತಮ್ಮ ಪಕ್ಷದಲ್ಲಿ ಸ್ಥಾನ ಸಿಗಲಾರದು ಎಂದು ಪಾಟೀಲ್ ಹೇಳಿದರು.

ಇದನ್ನೂ ಓದಿ: ಬಸನಗೌಡ ಯತ್ನಾಳ್​​ರನ್ನು ಉಚ್ಚಾಟಿಸಿ ಬಿಜೆಪಿ ಲಿಂಗಾಯತ ಸಮುದಾಯಕ್ಕೆ ಕೆಟ್ಟ ಸಂದೇಶ ನೀಡಿದೆ: ಶಿವರಾಜ ತಂಗಡಿಗಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.